??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????? 
ಜಿಲ್ಲೆ

ತ್ವರಿತ ಗತಿಯಲ್ಲಿ ಕೆಲಸ ಮಾಡಿ- ತಹಸೀಲ್ದಾರ್ ಕೆ.ಎನ್ ಚೈತ್ರಾ ಸೂಚನೆ

ಎ. ಆರ್. ರಘುರಾಮ

ಲೈಸನ್ಸ್‌ದಾರರ ಸಭೆ

ಹನೂರು : ಗ್ರಾಮ ಒನ್ ಕೇಂದ್ರಗಳಲ್ಲಿ ನಾಗರಿಕರು ಅರ್ಜಿ ಸಲ್ಲಿಸುವ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಬೇಕು. ಈ ಮೂಲಕ ಕೆಲಸ ಕಾರ್ಯಗಳು ತ್ವರಿತ ಗತಿಯಲ್ಲಿ ಸಾಗಬೇಕು ಎಂದು ತಹಸೀಲ್ದಾರ್ ಕೆ.ಎನ್ ಚೈತ್ರಾ ತಿಳಿಸಿದರು.

ಪಟ್ಟಣದ ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹದ ಸಭಾಂಗಣದಲ್ಲಿ ಪರಿಣಾಮಕಾರಿ ಸೇವೆ ಒದಗಿಸುವ ಸಂಬಂಧ ಸೋಮವಾರ ಆಯೋಜಿಸಿದ್ಧ ಗ್ರಾಮ ಒನ್ ಕೇಂದ್ರದ ಲೈಸನ್ಸ್‌ದಾರರ ಸಭೆಯಲ್ಲಿ ಮಾತನಾಡಿದರು.

ಗ್ರಾಮೀಣ ಭಾಗದ ಜನರು ಕೆಲಸ ಕಾರ್ಯಗಳಿಗಾಗಿ ಸರ್ಕಾರಿ ಕಚೇರಿಗೆ ಅಲೆಯುವುದನ್ನು ತಪ್ಪಿಸುವ ಉದ್ಧೇಶದಿಂದ ಗ್ರಾಮ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರವನ್ನು ತೆರೆಯಲಾಗಿದೆ. ವಿವಿಧ ಇಲಾಖೆಗೆ ಸಂಬಂಧಿಸಿದಂತೆ ಸೇವೆಯನ್ನು ನೀಡಲಾಗುತ್ತಿದೆ. ಇದರಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಆದಾಯ, ಜಾತಿ ಪ್ರಮಾಣ ಪತ್ರ, ವಾಸಸ್ಥಳ, ಭೂ ಹಿಡುವಳಿ, ಸಣ್ಣ ಹಿಡುವಳಿ, ಪಹಣಿ ಪತ್ರ, ವೃದ್ಧಾಪ್ಯ ವೇತನ, ವಂಶವೃಕ್ಷ ಪ್ರಮಾಣ ಪತ್ರ ಹಾಗೂ ಇನ್ನಿತರೆ ಕೆಲ ಸರ್ಕಾರಿ ಸೌಕರ್ಯವನ್ನು ಪಡೆಯಲು ನಾಗರಿಕರಿಂದ ಅರ್ಜಿ ಸ್ವೀಕರಿಸಲಾಗುತ್ತಿದೆ. ಈ ವೇಳೆ ಕಾಗದದ ದಾಖಲೆಗಳನ್ನು ಪಡೆಯಲಾಗುತ್ತಿದೆ. ಇದರಿಂದ ಕೆಲಸ ಕಾರ್ಯಗಳು ವಿಳಂಬವಾಗುತ್ತಿದೆ. ಆದ್ದರಿಂದ ಪಡೆಯುವ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಕಂಪ್ಯೂಟರ್‌ನಲ್ಲಿ ಅಪ್‌ಲೋಡ್ ಮಾಡಬೇಕು. ಇದರಿಂದ ಕೆಲಸ ಕಾರ್ಯಗಳು ಸುಗಮವಾಗಲಿದೆ. ಸಾರ್ವಜನಿಕರಿಗೂ ಅನುಕೂಲವಾಗಲಿದೆ ಎಂದರು.

ಪ್ರತಿಯೊಬ್ಬರೂ ಈ ಬಗ್ಗೆ ಮನದಟ್ಟು ಮಾಡಿಕೊಂಡು ಕಾರ್ಯನಿರ್ವಹಿಸಬೇಕು. ಈ ಮೂಲಕ ಜನರಿಗೆ ಉತ್ತಮ ಸೇವೆ ಒದಗಿಸಬೇಕು. ಸಮಸ್ಯೆಗಳಿದ್ದಲ್ಲಿ ಗಮನಕ್ಕೆ ತರಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಉಪ ತಹಸೀಲ್ದಾರ್ ಸುರೇಖಾ, ಶಿರಸ್ತೇದಾರ್ ನಾಗೇಂದ್ರ, ಕಚೇರಿ ನೌಕರರು, ಗ್ರಾಮ ಒನ್ ಕೇಂದ್ರದ ಲೈನ್ಸ್ ದಾರರು ಹಾಗೂ ಇನ್ನಿತರರು ಇದ್ದರು.