ಜಿಲ್ಲೆ

ಬಿದಿರು ಪರಿಕರಗಳ ತಯಾರಿಕಾ ತರಬೇತಿ

ಕಿರಣ್ ಮಾದರಹಳ್ಳಿ

ಹನೂರು: ತಾಲೂಕಿನ ಪೊನ್ನಾಚಿ ಗ್ರಾಮದ ಬಿದಿರು ಸಂಸ್ಕರಣಾ ಕೇಂದ್ರದಲ್ಲಿ ಶುಕ್ರವಾರ ಮಲೆ ಮಹದೇಶ್ವರ ವನ್ಯಜೀವಿ ವಿಭಾಗ, ಪರಿಸರ ಅಭಿವೃದ್ಧಿ ಸಮಿತಿ ಹಾಗೂ ಇಂಡಸ್ಟ್ರಿ ಫೌಂಡೇಷನ್ ವತಿಯಿಂದ ಬಿದಿರು ಪರಿಕರಗಳ ತಯಾರಿಕಾ ತರಬೇತಿಗೆ ಚಾಲನೆ ನೀಡಲಾಯಿತು.

ಡಿಸಿಎಫ್ ಸಂತೋಷ್‌ಕುಮಾರ್ ಮಾತನಾಡಿ, ಅರಣ್ಯ ಪ್ರದೇಶದ ತಪ್ಪಲಿನಲ್ಲಿ ವಾಸಿಸುವ ಜನರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಪೊನ್ನಾಚಿಯಲ್ಲಿ ಗ್ರಾಮದಲ್ಲಿ ಬಿದಿರು ಸಂಸ್ಕರಣ ಕೇಂದ್ರ ಸ್ಥಾಪಿಸಲಾಗಿದ್ದು, ಈ ವರ್ಷ ರಾಷ್ಟ್ರೀಯ ಬಿದಿರು ಯೋಜನೆಯಡಿ ಗ್ರಾಮದ ಜನರಿಗೆ ಒಂದು ತಿಂಗಳು ಕೌಶಲಾಧಾರಿತ ತರಬೇತಿ ನೀಡಲಾಗುತ್ತಿದೆ. ತರಬೇತಿಯಲ್ಲಿ ಭಾಗಿಯಾದವರಿಗೆ ಗೌರವಧನ ನೀಡಲಾಗುತ್ತದೆ. ಜತೆಗೆ ಸಂಸ್ಕರಣ ಘಟಕದಲ್ಲಿಯೇ ಉದ್ಯೋಗ ನೀಡಲಾಗುತ್ತದೆ. ಆದ್ದರಿಂದ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಳ್ಳಬೇಕು. ಇದರಿಂದ ಆರ್ಥಿಕವಾಗಿ ಸಬಲರಾಗುವುದರ ಜತೆಗೆ ಕುಟುಂಬದ ನಿರ್ವಹಣೆಗೆ ಅನುಕೂಲವಾಗುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗ್ರಾಮಸ್ಥರು ಇದ್ದರು.