ಹನೂರು: ತಾಲೂಕಿನ ಚಿಕ್ಕ ಮಾಲಾಪುರ ಗ್ರಾಮದಲ್ಲಿ ಚಿರತೆ ದಾಳಿಗೆ ಮೇಕೆ ಬಲಿಯಾಗಿದೆ. ಮಾದಪ್ಪ ಎಂಬುವರ ಜಮೀನಿನ ಮನೆಯ ಮುಂಭಾಗದಲ್ಲಿ ಕಟ್ಟಿ ಹಾಕಲಾಗಿದ್ದ ಮೇಕೆ. ಕಟ್ಟಿ ಹಾಕಲಾಗಿದ್ದ ಎರಡು ಮೇಕೆಗಳಲ್ಲಿ ಒಂದನ್ನು ಬಲಿ ಪಡೆದುಕೊಂಡ ಚಿರತೆ….ವಿಷಯ ತಿಳಿದು ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಸರ್ಕಾರದಿಂದ ಪರಿಹಾರ ಕೊಡುವ ಭರವಸೆ ನೀಡಿದ್ದಾರೆ. ಚಿರತೆ ಹಾವಳಿಯನ್ನು ತಡೆಗಟ್ಟುವಂತೆ ಮಾದಪ್ಪ ಒತ್ತಾಯಿಸಿದ್ದಾರೆ.