ಜಿಲ್ಲೆ

ಮಕ್ಕಳಿಗೆ ಶಾಲಾ ಬ್ಯಾಗ್, ಲೇಖನ ಸಾಮಗ್ರಿ ವಿತರಣೆ

ಕಿರಣ್ ಮಾದರಹಳ್ಳಿ

ಹನೂರು: ತಾಲೂಕಿನ ಮಂಗಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶುಕ್ರವಾರ ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ನರಸಿಂಹಮೂರ್ತಿ ಹಾಗೂ ವಿಜಯ ಫೌಂಡೇಷನ್ ಅಧ್ಯಕ್ಷ ವಿಜಯಕುಮಾರ್ ಅವರು ಶಾಲಾ ಬ್ಯಾಗ್ ಹಾಗೂ ಲೇಖನ ಸಾಮಗ್ರಿ ಉಚಿತವಾಗಿ ವಿತರಿಸಿದರು.

ವಿಜಯಕುಮಾರ್ ಮಾತನಾಡಿ, ಶಿಕ್ಷಣ ದೇಶದ ಭವಿಷ್ಯವನ್ನು ರೂಪಿಸುವ ಪ್ರಮುಖ ಅಸ್ತ್ರ. ಹಾಗಾಗಿ ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದು, ಹಲವು ಸವಲತ್ತುಗಳನ್ನು ನೀಡುತ್ತಿದೆ. ಹಾಗೆಯೇ ಕೆಲ ಸಂಘ ಸಂಸ್ಥೆಗಳು ಹಾಗೂ ದಾನಿಗಳು ಸಹ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿರುವ ಮಕ್ಕಳಿಗೆ ಕೆಲವು ಸವಲತ್ತುಗಳನ್ನು ನೀಡುತ್ತಿವೆ. ಈ ದೆಸೆಯಲ್ಲಿ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ಬ್ಯಾಗ್ ಹಾಗೂ ಕಲಿಕಾ ಸಾಮಗ್ರಿಯನ್ನು ವಿತರಿಸಲಾಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಇದರ ಪ್ರಯೋಜನ ಪಡೆದುಕೊಂಡು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ತಿಳಿಸಿದರು.

ಫೌಂಡೇಷನ್ ಸದಸ್ಯರಾದ ಕಾಂತರಾಜು, ಶ್ರೀಧರ್, ಲಕ್ಷ್ಮೀ ನಾರಾಯಣ, ಕೃಷ್ಣಮೂರ್ತಿ, ಕಿರಣ್, ಮುಖ್ಯ ಶಿಕ್ಷಕಿ ರಾಣಿ, ಶಿಕ್ಷಕರಾದ ಮಹಾಲಕ್ಷ್ಮೀ, ಸುಜಾತಾ, ಚಿನ್ನರಾಜು, ಮಹಾದೇವ, ಗಿರೀಶ್ ಇನ್ನಿತರರು ಇದ್ದರು.