ಜಿಲ್ಲೆ

ಸುಳಿಗೆ ಸಿಲುಕಿ ಇಬ್ಬರು ಯುವಕರು ಸಾವು

ಕಿರಣ್ ಮಾದರಹಳ್ಳಿ

ಹನೂರು: ತಾಲೂಕಿನ ಹೊಗೆನಕಲ್ ಫಾಲ್ಸ್‌ನಲ್ಲಿ ಶನಿವಾರ ಈಜಲು ತೆರಳಿದ್ದ ವೇಳೆ ತಮಿಳುನಾಡಿನ ಇಬ್ಬರು ಯುವಕರು ಸುಳಿಗೆ ಸಿಲುಕಿ ಮೃತಪಟ್ಟಿದ್ದಾರೆ.

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಪೋಚಂಬಳ್ಳಿ ತಾಲೂಕಿನ ಕೋಣನೂರು ಗ್ರಾಮದ ಶಬರಿ (24) ಹಾಗೂ ಇದೇ ತಾಲೂಕಿನ ಮೇಲ್ ಚಂಗಂಪಟ್ಟಿ ಗ್ರಾಮದ ಅಜಿತ್‌ಕುಮಾರ್ (26) ಮೃತರು. ಇವರು 12 ಸ್ನೇಹಿತರೊಡನೆ ಊಟಿ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಪ್ರವಾಸ ಮುಗಿಸಿ ಶನಿವಾರ ಬೆಳಗ್ಗೆ ಮ.ಬೆಟ್ಟಕ್ಕೆ ಆಗಮಿಸಿದ್ದು, ದೇವರ ದರ್ಶನ ಪಡೆದಿದ್ದಾರೆ. ಊರಿಗೆ ಹಿಂತಿರುಗುವಾಗ ಹೊಗೆನಕಲ್ ಫಾಲ್ಸ್‌ಗೆ ತೆರಳಿದ್ದರು. ಈ ವೇಳೆ ಸ್ನೇಹಿತರೊಡನೆ ಈಜಲು ತೆರಳಿದ್ದಾಗ ಈ ಇಬ್ಬರು ಯುವಕರು ಸುಳಿಗೆ ಸಿಲುಕಿ ಮೃತಪಟ್ಟಿದ್ದಾರೆ.

ಮಾಹಿತಿ ತಿಳಿದ ಮಹದೇಶ್ವರ ಬೆಟ್ಟದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು, ಮೃತದೇಹವನ್ನು ಹನೂರಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ. ಈ ಸಂಬಂಧ ಮ.ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.