ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ಅಪ್ರಾಪ್ತೆ 5 ತಿಂಗಳ ಗರ್ಭಿಣಿಯಾಗಿದ್ದು, ಇದಕ್ಕೆ ಕಾರಣನಾದವನನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.
ತಾಲೂಕಿನ ಬಿದರಹಳ್ಳಿ ಗ್ರಾಮದ ವಿನೋದ್ ಬಂಧಿತ ಆರೋಪಿ. ಹಲವು ತಿಂಗಳ ಹಿಂದೆ ಅಪ್ರಾಪ್ತೆ ನಾಪತ್ತೆಯಾಗಿದ್ದು, ಈ ಸಂಬಂಧ ಈಕೆಯ ತಂದೆ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಹುಡುಕಾಟದಲ್ಲಿ ತೊಡಗಿದ್ದರು. ಅಪ್ರಾಪ್ತೆಯನ್ನು ಆರೋಪಿ ವಿನೋದ್ ಮನೆಯಲ್ಲಿ ಇರಿಸಿಕೊಂಡಿರುವ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ತೆರಳಿ ಆತನನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ, ಆಕೆ 5 ತಿಂಗಳ ಗರ್ಭಿಣಿಯಾಗಲು ಈತನೇ ಕಾರಣ ಎಂದು ತಿಳಿದು ಬಂದಿದೆ.
ಈ ಸಂಬಂಧ ಇನ್ಸ್‌ಪೆಕ್ಟರ್ ಜಗದೀಶ್ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ನ್ಯಾಯಾಲಯದ ಆದೇಶದಂತೆ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಈ ಸಂಬಂಧ ಮ.ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.