ಹನೂರು: ತಾಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ಬಳಿ ಭಾನುವಾರ ಆಯತಪ್ಪಿ ಬಿದ್ದು ಬೈಕ್ ಸವಾರ ಮೃತಪಟ್ಟಿದ್ದಾರೆ.
ಗ್ರಾಮದ ಮಹದೇವ (70) ಮೃತರು. ಗ್ರಾಮದ ತೋಟದ ಮನೆಯಲ್ಲಿ ವಾಸವಾಗಿದ್ದು ಬೆಳಗ್ಗೆ ಕಾರ್ಯನಿಮಿತ್ತ ರಾಮಾಪುರಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ನಾಯಿ ಅಡ್ಡ ಬಂದಿದ್ದರಿಂದ ಆಯತಪ್ಪಿ ಬಿದ್ದು ಗಾಯಗೊಂಡರು. ಸ್ಥಳೀಯರು ಆಂಬುಲೆನ್ಸ್ ಮೂಲಕ ಕೊಳ್ಳೇಗಾಲ ಸರ್ಕಾರಿ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.