ಜಿಲ್ಲೆ

ಸುನೀಲ್‌ಬೋಸ್ ಗೆಲ್ಲಿಸುವಂತೆ ಮನವಿ

ಕಿರಣ್ ಮಾದರಹಳ್ಳಿ

ಹನೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವುದರ ಮೂಲಕ ಪಕ್ಷದ ಅಭ್ಯರ್ಥಿ ಸುನೀಲ್‌ಬೋಸ್ ಅವರನ್ನು ಗೆಲ್ಲಿಸುವಂತೆ ಮಾಜಿ ಶಾಸಕ ಆರ್.ನರೇಂದ್ರ ಮನವಿ ಮಾಡಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಾಮಪತ್ರ ಸಲ್ಲಿಕೆಗೆ ಆಗಮಿಸುವ ಸಂಬಂಧ ಆಯೋಜಿಸಿದ್ದ ಪಕ್ಷದ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಡಾ.ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನವನ್ನು ರಚಿಸಿ ಮೀಸಲಾತಿ ಕಲ್ಪಿಸಿದ ಪರಿಣಾಮ ರಾಜಕೀಯವಾಗಿ ಮಹಿಳೆಯರಿಗೂ ಸ್ಥಾನಮಾನ ನೀಡಿದೆ. ಆದರೆ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಜನತೆ ಸ್ವಾತಂತ್ರ್ಯ ಪೂರ್ವದಲ್ಲಿ ಇದ್ದ ಹಾಗೆ ಉಳ್ಳವರ ಕಪಿಮುಷ್ಠಿಯಲ್ಲಿ ಸಿಲುಕಿ ಹಾಕಿಕೊಳ್ಳಬೇಕಾಗುತ್ತದೆ. ಆದ್ದರಿಂದ ಈ ಬಾರಿಯ ಲೋಕಸಭೆ ಚುನಾವಣೆ ದೇಶದ ಅಳಿವು ಉಳಿವಿನ ಪ್ರಶ್ನೆಯಾಗಿದೆ. ಆದ್ದರಿಂದ ಈ ಬಗ್ಗೆ ಪ್ರತಿಯೊಬ್ಬರೂ ಮನದಟ್ಟು ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಬ್ಲಾಕ್ ಅಧ್ಯಕ್ಷ ಹನೂರಿನ ಮುಕುಂದವರ್ಮ, ರಾಮಾಪುರದ ಈಶ್ವರ್, ಚಾಮುಲ್ ಅಧ್ಯಕ್ಷ ಶಾಹುಲ್ ಅಹಮದ್, ಜಿಲ್ಲಾ ಹಾಪ್‌ಕಾಮ್ಸ್ ನಿರ್ದೇಶಕ ಶಿವಪುರ ಲೋಕೇಶ್, ಜಿಪಂ ಮಾಜಿ ಉಪಾಧ್ಯಕ್ಷ ಬಸವರಾಜು, ಮುಖಂಡರಾದ ಮಣಿ, ಸಿದ್ದರಾಜು, ಮಹೇಶ್ ಇನ್ನಿತರರು ಇದ್ದರು.