ಚಾಮರಾಜನಗರ: ತಾಲೂಕಿನ ಹರದನಹಳ್ಳಿ ದಿವ್ಯಲಿಂಗೇಶ್ವರ ದೇವಸ್ಥಾನದ ಶ್ರೀ ಶಾರದಾದೇವಿ ಸನ್ನಿಧಿಯಲ್ಲಿ ಅಂಕನಶೆಟ್ಟಿಪುರದ ಪ್ರೇರಣಾ ವಿದ್ಯಾಸಂಸ್ಥೆ ವತಿಯಿಂದ ಮಕ್ಕಳಿಗೆ ಸೋಮವಾರ ಸಾಮೂಹಿಕವಾಗಿ ಅಕ್ಷರಾಭ್ಯಾಸ ಮಾಡಿಸಲಾಯಿತು.
ಈ ವೇಳೆ ದೇವಾಲಯದ ಅರ್ಚಕ ವೇಣುಗೋಪಾಲ್ ಮಾತನಾಡಿ, ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಹಿಂದು ಧರ್ಮದ ಪ್ರಕಾರ ಶಾರದಾ ಮಾತೆಯ ಮುಂದೆ ಅಕ್ಷರ ಅಭ್ಯಾಸ ಮಾಡಿಸುತ್ತಾರೆ. ಹಿಂದಿನ ಕಾಲದಲ್ಲಿ ಶ್ರೀ ಶೃಂಗೇರಿ ಶಾರದಾ ಮಾತೆಯ ಮಡಿಲಿನಲ್ಲಿ ಇಂತಹ ಕಾರ್ಯಕ್ರಮಗಳು ನಡೆಯುತ್ತಿದ್ದವು. ಇತ್ತೀಚಿನ ದಿನಗಳಲ್ಲಿ ಜಿಲ್ಲೆಯ ಇತಿಹಾಸ ಪ್ರಸಿದ್ಧ ಹರದನಹಳ್ಳಿ ದೇವಾಲಯದ ಶಾರದಾ ಮಾತೆ ಗುಡಿಯಲ್ಲಿ ಅಕ್ಷರಾಭ್ಯಾಸ ನಡೆಯುತ್ತಿದೆ ಎಂದರು.
ಪ್ರೇರಣಾ ವಿದ್ಯಾಸಂಸ್ಥೆಯ ಅಧ್ಯಕ್ಷ ಬಿ.ಪಿ.ಪ್ರಕಾಶ್, ಕಾರ್ಯದರ್ಶಿ ಶಿವಸ್ವಾಮಿ, ಟ್ರಸ್ಟಿಗಳಾದ ಎ.ಎಸ್.ಮಹದೇವಸ್ವಾಮಿ, ನಟರಾಜನ್, ಶಾಲೆಯ ಮುಖ್ಯ ಶಿಕ್ಷಕ, ಸಹ ಶಿಕ್ಷಕರು ಮತ್ತು ಪಾಲಕರು ಇದ್ದರು.