ಹರಪನಹಳ್ಳಿಯಲ್ಲಿ ಪೌರ ಕಾರ್ಮಿಕರು ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರ ಬೆಂಬಲಿಸಿ ಕೆಎಸ್‌ಆರ್‌ಟಿಸಿ ಮಾಜಿ ನಿರ್ದೇಶಕ ಆರುಂಡಿ ನಾಗರಾಜ ಮಾತನಾಡಿದರು. ಬಿಜೆಪಿ ಮಂಡಲ ಅಧ್ಯಕ್ಷ ಕೆ.ಲಕ್ಷ್ಮಣ್, ಪುರಸಭಾ ಸದಸ್ಯ ಮಂಜುನಾಥ ಇಜಂತಕರ್, ಪಕ್ಷದ ಪ್ರಮುಖರಾದ ಡಾ.ರಮೇಶ, ಎಂ.ಪಿ.ನಾಯ್ಕ, ಬಾಗಳಿ ಕೊಟ್ರೇಶಪ್ಪ, ಕಣವಿಹಳ್ಳಿ ಮಂಜುನಾಥ ಇತರರಿದ್ದರು. 
ಜಿಲ್ಲೆ

ಆರೋಗ್ಯ ಸಂಜೀವಿನಿ ಯೋಜನೆ ಸೌಲಭ್ಯ ಸಿಗಲಿ

ಶಾಮಸುಂದರ್ ಕೊಪ್ಪಳಕರ್

ಹರಪನಹಳ್ಳಿ:  ರಾಜ್ಯ ಸರ್ಕಾರ ಪೌರ ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಶೀಘ್ರ ಈಡೇರಿಸಬೇಕು ಎಂದು ರಾಜ್ಯ ಸಹಕಾರಿ ಸಂಘದ ಅಧ್ಯಕ್ಷ ಜಿ.ನಂಜನಗೌಡ ಹೇಳಿದರು.

ಪಟ್ಟಣದಲ್ಲಿ ಪೌರ ಕಾರ್ಮಿಕರು ನಡೆಸಿರುವ ಅನಿರ್ದಿಷ್ಟಾವಧಿ ಮುಷ್ಕರ ಬೆಂಬಲಿಸಿ ಶುಕ್ರವಾರ ಮಾತನಾಡಿದರು. ಪೌರ ಕಾರ್ಮಿಕರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ವೇತನ ಕೊಡಬೇಕು. ಗುತ್ತಿಗೆ, ಹೊರಗುತ್ತಿಗೆ ಬೇಡ. ನಾಲ್ಕು ದಿನಗಳಿಂದ ಪೌರ ಕಾರ್ಮಿಕರ ಮುಷ್ಕರದ ಪರಿಣಾಮ ಎಲ್ಲೆಂದರಲ್ಲಿ ಕಸದ ರಾಶಿಗಳು ಬಿದ್ದಿದೆ. ಪೌರ ಕಾರ್ಮಿಕರಿಗೂ ಜ್ಯೋತಿ ಸಂಜೀವಿನಿ ಮತ್ತು ಆರೋಗ್ಯ ಸಂಜೀವಿನಿಯಂಥ ಯೋಜನೆಗಳ ಪ್ರಯೋಜನ ಸಿಗಬೇಕು ಎಂದು ಆಗ್ರಹಿಸಿದರು.

ಕೆಎಸ್‌ಆರ್‌ಟಿಸಿ ಮಾಜಿ ನಿರ್ದೇಶಕ ಆರುಂಡಿ ನಾಗರಾಜ ಮಾತನಾಡಿ, ಪೌರ ಕಾರ್ಮಿಕರು ಒಂದು ದಿನ ಕೆಲಸ ಮಾಡದಿದ್ದರೆ ನಗರದಲ್ಲಿ ಎಂತಹ ಕ್ಲಿಷ್ಟಕರ ಪರಿಸ್ಥಿತಿ ನಿರ್ಮಾಣವಾಗಲಿದೆ ಎನ್ನುವುದು ಈಗ ನೋಡುತ್ತಿದ್ದೇವೆ. ಚರಂಡಿಯಿಂದ ಹಿಡಿದು ಶೌಚಗುಂಡಿಯನ್ನು ಶುಚಿಗೊಳಿಸುವ ಪೌರ ಕಾರ್ಮಿಕರನ್ನು ಸರ್ಕಾರ ಕಡೆಗಣಿಸುತ್ತಿರುವುದು ಸರಿಯಲ್ಲ. ಅವರನ್ನು ಕಾಯಂ ಗೊಳಿಸಬೇಕೆಂದು ಒತ್ತಾಯಿಸಿದರು.

ಪೌರ ಕಾರ್ಮಿಕ ನೌಕರರ ತಾಲೂಕು ಘಟಕದ ಅಧ್ಯಕ್ಷ ನಾಗರಾಜ್, ಕಾರ್ಮಿಕರಾದ ಮಂಜುನಾಥ ಇತರರಿದ್ದರು.