ಜಿಲ್ಲೆ

ಸಕ್ಕಿಂಗ್ ಯಂತ್ರಗಳ ಬಳಕೆ ಕಡ್ಡಾಯ; ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಎಸಿ ಪ್ರಸನ್ನಕುಮಾರ

Davanagere

ಹರಪನಹಳ್ಳಿ: ತ್ಯಾಜ್ಯ ಗುಂಡಿಗಳ ಸ್ವಚ್ಛತೆ ವೇಳೆ ಸಕ್ಕಿಂಗ್ ಯಂತ್ರ ಬಳಸದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಕಂದಾಯ ಇಲಾಖೆ ಉಪವಿಭಾಗಾಧಿಕಾರಿ ವಿ.ಕೆ.ಪ್ರಸನ್ನಕುಮಾರ ಎಚ್ಚರಿಸಿದರು.

ಮಿನಿವಿಧಾನ ಸೌಧದಲ್ಲಿ ಶುಕ್ರವಾರ ಆಯೋಜಿಸಿದ್ದ ಮಲ ಹೊರುವ ಪದ್ಧತಿ ನಿರ್ಮೂಲನೆ ಹಾಗೂ ಎಸ್ಸಿ, ಎಸ್ಟಿ ದೌರ್ಜನ್ಯ ಕಾಯ್ದೆ ಜಾಗೃತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತ್ಯಾಜ್ಯ ಗುಂಡಿಗಳ ಸ್ವಚ್ಛತೆಗೆ ನಾಗರಿಕರು ಶುಲ್ಕ ನೀಡಿದರೂ ಯಂತ್ರಗಳ ಸಮರ್ಪಕ ಬಳಕೆಯಾಗುತ್ತಿಲ್ಲ ಎಂಬ ದೂರುಗಳಿವೆ. ಈ ಕುರಿತು ಗಮನ ಹರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಕ್ಕಿಂಗ್ ಯಂತ್ರ ನಿರ್ವಹಣೆ ಮಾಡುವ ಸಿಬ್ಬಂದಿ ಹಾಗೂ ಅದಕ್ಕೆ ಸಂಬಂಧ ಪಟ್ಟ ಸಾಮಗ್ರಿಗಳ ಕೊರತೆ ಕುರಿತು ಸರ್ಕಾರದ ಗಮನ ಸೆಳೆಯುತ್ತೇನೆ. ಯಂತ್ರಗಳ ಬಳಕೆ ಕುರಿತು ಗ್ರಾಪಂ ಮಟ್ಟದಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.