ಕಾರ್ಕಳ: ಕಂಪ್ಯೂಟರ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗ, ಮಾಹಿತಿ ವಿಜ್ಞಾನ ಮತ್ತು ಇಂಜಿನಿಯರಿಂಗ್ ಹಾಗೂ ಆಂತರಿಕ ಗುಣಮಟ್ಟ ಭರವಸೆ ಸೆಲ್ (ಐಕ್ಯುಎಸಿ) ಸಹಯೋಗದೊಂದಿಗೆ ಬೋಧಕೇತರ ಸಿಬ್ಬಂದಿಗೆ ಹಾರ್ಡ್‌ವೇರ್ ಮತ್ತು ನೆಟ್‌ವರ್ಕಿಂಗ್ ತರಬೇತಿ ಕಾರ್ಯಾಗಾರ ನಿಟ್ಟೆ ಎನ್‌ಎಂಎಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇತ್ತೀಚೆಗೆ ನಡೆಯಿತು.
ಮಾಹಿತಿ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಭಾಗದ ಹಿರಿಯ ಲ್ಯಾಬ್ ಅಸಿಸ್ಟೆಂಟ್ ಪ್ರವೀಣ್ ಶೆಟ್ಟಿ, ಕಂಪ್ಯೂಟರ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಹಿರಿಯ ಲ್ಯಾಬ್ ಸಹಾಯಕ ಅಬ್ದುಲ್ ಶುಕೂರ್, ನೆಟ್‌ವರ್ಕ್ ಅಡ್ಮಿನಿಸ್ಟ್ರೇಟರ್ ಮುಹಮ್ಮದ್ ಅಲಿ, ಎನ್‌ಎಂಎಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಲೂಣ್ಕರ್ ಉಪಸ್ಥಿತರಿದ್ದರು.
ಮಾಹಿತಿ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥೆ ಡಾ.ಅಶ್ವಿನಿ ಬಿ. ಸ್ವಾಗತಿಸಿದರು. ಕಂಪ್ಯೂಟರ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗ ಲ್ಯಾಬ್ ಅಸಿಸ್ಟೆಂಟ್ ಚೇತನ್ ಪ್ರಾರ್ಥಿಸಿದರು. ಸಿಸಿಇ ವಿಭಾಗದ ಮುಖ್ಯಸ್ಥ ಡಾ.ರಾಧಾಕೃಷ್ಣ ವಂದಿಸಿದರು. ಕಂಪ್ಯೂಟರ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗ ಸಹಾಯಕ ಪ್ರಾಧ್ಯಾಪಕಿ ಡಾ.ಮಮತಾ ಹಾಗೂ ಜ್ಯೋತಿ ಪ್ರಸಾದ್ ಸಂಯೋಜಿಸಿದರು.