ಜಿಲ್ಲೆ

ಹಾರ್ಡ್‌ವೇರ್ ಅಂಗಡಿಗೆ ಬೆಂಕಿ

ಜಿ.ಹೆಚ್. ಧನ್ಯಕುಮಾರ್

ತರೀಕೆರೆ: ಕೋಡಿಕ್ಯಾಂಪ್ ವೃತ್ತ ಸಮೀಪದ ಹಾರ್ಡ್‌ವೇರ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಅಂಗಡಿಯಲ್ಲಿದ್ದ ಸಾಮಗ್ರಿಗಳು ಸುಟ್ಟು ಕರಕಲಾಗಿದೆ.

ಬೆಳಗ್ಗೆ 3 ಗಂಟೆಗೆ ಹಾರ್ಡ್‌ವೇರ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು ಅಂಗಡಿಪೂರ್ತಿ ಜ್ವಾಲೆ ಆವರಿಸಿಕೊಂಡಿದೆ. ಸ್ಥಳೀಯರು ಕೂಡಲೇ ಅಂಗಡಿ ಮಾಲೀಕರು ಹಾಗೂ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ತರೀಕೆರೆ, ಕಡೂರು ಅಗ್ನಿ ಶಾಮಕ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿ ಬೆಂಕಿ ನಿಯಂತ್ರಣಕ್ಕೆ ತಂದಿದ್ದಾರೆ. ಅವಘಡದಲ್ಲಿ ವಿವಿಧ ಮೋಟಾರ್, ವೈರ್, ಪೈಪ್‌ಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.