ಹಾಸನ: ಜಿಲ್ಲೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ನಡೆದಿದೆ.
ಕಿರಣ್ ಮೃತ ಎಸ್ಐ. ಇವರು ಚನ್ನರಾಯಪಟ್ಟಣ ಟೌನ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕೆಲಸದ ಒತ್ತಡದಿಂದ ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ಚನ್ನರಾಯಪಟ್ಟಣ ಪಟ್ಟಣ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ಮತ್ತು ಇಂದು ಎರಡು ಕೊಲೆಯಾಗಿತ್ತು. ಕೊಲೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ ಕಿರಣ್ ಅವರು ಪರಿಶೀಲನೆ ನಡೆಸಿದ್ದರು. ಆದರೆ, ಇಂದು ಬೆಳಗ್ಗೆ ಆತ್ಮಹತ್ಯೆಗೆ ಶರಣಾಗಿರುವುದು ಅನುಮಾನಕ್ಕೆ ಎಡೆಮಾಡಿ ಕೊಟ್ಟಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಪೊಲೀಸ್ ಅಧಿಕಾರಿಯ ಸೂಸೈಡ್ನಿಂದ ಪೊಲೀಸ್ ಇಲಾಖೆ ಇದೀಗ ಆತಂಕಕ್ಕೀಡಾಗಿದೆ. ಆತ್ಮಹತ್ಯೆ ಸಂಬಂಧ ಚನ್ನರಾಯಪಟ್ಟಣ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. (ದಿಗ್ವಿಜಯ ನ್ಯೂಸ್)