ಜಿಲ್ಲೆ

ಈಗಲೇ ವಿಚಾರಣೆಗೆ ಹಾಜರಾಗಿ: ಪ್ರಜ್ವಲ್ ರೇವಣ್ಣ ಹೊಳೆನರಸೀಪುರದ ಮನೆ ಬಾಗಿಲಿಗೆ ನೊಟೀಸ್‌ ಅಂಟಿಸಿ ಎಸ್‌ಐಟಿ ವಾಪಸ್

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಇದೀಗ ಎಸ್‍ಐಟಿ ಅಂಗಳದಲ್ಲಿದೆ. ಪ್ರಕರಣದ ತನಿಖೆಗೆ ಇಳಿದಿರುವ ವಿಶೇಷ ತನಿಖಾ ತಂಡದ  ಅಧಿಕಾರಿಗಳು ಪ್ರಜ್ವಲ್ ರೇವಣ್ಣ, ರೇವಣ್ಣಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.

ಮಾಜಿ ಸಚಿವ ಎಚ್‌.ಡಿ ರೇವಣ್ಣ  ಹಾಗು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇವರಿಬ್ಬರ ಹೊಳೆನರಸೀಪುರ ಮನೆಯಲ್ಲಿ ಯಾರೂ ಇಲ್ಲದ ಕಾರಣ ಮನೆಯ ಬಾಗಿಲಿಗೆ ನೊಟೀಸ್ ಅಂಟಿಸಿದ್ದು, ಎಸ್‌ಐಟಿ ತನಿಖೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

ನೋಟಿಸ್ ಸಿಕ್ಕ ತಕ್ಷಣ ಹಾಜರಾಗಿ ವಿಚಾರಣೆಗೆ ಸಹಕರಿಸಬೇಕು. ಇಲ್ಲದೇ ಹೋದರೆ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ನೋಟಿಸ್‍ನಲ್ಲಿಯೇ ಕಾನೂನು ಕ್ರಮದ ಎಚ್ಚರಿಕೆ ಉಲ್ಲೇಖ ಮಾಡಲಾಗಿದೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ರೇವಣ್ಣ ಹಾಗೂ ಪ್ರಜ್ವಲ್ ಇಂದು ವಿಚಾರಣೆಗೆ ಹಾಜರಾಗ್ತಾರಾ ಎಂಬುದನ್ನು ಕಾದು ನೋಡಬೇಕು.

ಪ್ರಜ್ವಲ್‌ ರೇವಣ್ಣ ಜರ್ಮನಿಗೆ ತೆರಳಿದ್ದು, ಎಚ್‌ಡಿ ರೇವಣ್ಣ ಅವರು ಉತ್ತರ ಕರ್ನಾಟಕದ ಚುನಾವಣೆ ಪ್ರಚಾರಕ್ಕೆ ತೆರಳಿದ್ದಾರೆ ಎನ್ನಲಾಗಿದೆ.