ಅರಕಲಗೂಡಿನಲ್ಲಿ ಭಾನುವಾರ ಏರ್ಪಡಿಸಿದ್ದ ಮಾಜಿ ಪ್ರಧಾನಿ ಡಾ.ಬಾಬು ಜಗಜೀವನ ರಾಮ್ ಜಯಂತಿ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು. ಎ. ಮಂಜು, ಕೆ.ಸಿ.ಸೌಮ್ಯಾ, ವೆಂಕಟೇಶ್ ಇತರರಿದ್ದರು. 
ಹಾಸನ

ಸಮಾಜ ಸುಧಾರಣೆಗೆ ಶ್ರಮಿಸಿದ ಮಹನೀಯ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎ.ಮಂಜು ಹೇಳಿಕೆ
  • ಡಾ.ಬಾಬು ಜಗಜೀವನರಾಮ್ ಜಯಂತಿ
ಅರಕಲಗೂಡು: ಸಮಾಜ ಸುಧಾರಣೆಗೆ ಶ್ರಮಿಸಿದ ಡಾ.ಬಾಬು ಜಗಜೀವನ ರಾಮ್ ಅವರು ದೇಶ ಕಂಡು ಮಹಾನ್ ವ್ಯಕ್ತಿಗಳಲ್ಲಿ ಅಗ್ರಗಣ್ಯರೆನಿಸಿದ್ದು, ಇವರ ಆದರ್ಶಗಳು ಅನುಕರಣೀಯ ಎಂದು ಶಾಸಕ ಎ.ಮಂಜು ಹೇಳಿದರು.
ಪಟ್ಟಣದ ದೇವರಾಜ ಅರಸು ಭವನದಲ್ಲಿ ತಾಲೂಕು ಆಡಳಿತದ ವತಿಯಿಂದ ಭಾನುವಾರ ಆಯೋಜಿಸಿದ್ದ ಮಾಜಿ ಪ್ರಧಾನಿ ಡಾ.ಬಾಬು ಜಗಜೀವನರಾಮ್ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹಸಿರು ಕ್ರಾಂತಿಗೆ ಶ್ರಮಿಸಿದ ಡಾ.ಜಗಜೀವನ ರಾಮ್ ಅವರು ಎಲ್ಲ ವರ್ಗದ ಜನರ ಶ್ರೇಯೋಭಿದ್ಧಿಗೆ ಕಾರಣರಾಗಿದ್ದರು. ಇವರ ಆದರ್ಶ ಗುಣಗಳನ್ನು ಬದುಕಿನಲ್ಲಿ ಎಲ್ಲರೂ ಅಳವಡಿಸಿಕೊಂಡು ಮುನ್ನಡೆಯಬೇಕಿದೆ ಎಂದರು.
ತಹಸೀಲ್ದಾರ್ ಕೆ.ಸಿ.ಸೌಮ್ಯಾ, ಪಪಂ ಮುಖ್ಯಾಧಿಕಾರಿ ನಾಗೇಂದ್ರ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರವಿಕುಮಾರ್, ಸಿಡಿಪಿಒ ವೆಂಕಟೇಶ್, ಬಿಇಒ ನಾರಾಯಣ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು. ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು.