ಹಾಸನದ ಹೊಯ್ಸಳ ನಗರ ಹಾಗೂ ಬೀರನಹಳ್ಳಿಕೆರೆ ಬಡಾವಣೆಗಳಿಗೆ ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಾಲಿಕೆ ಆಯುಕ್ತ ಕೃಷ್ಣಮೂರ್ತಿ ಇತರರು ಇದ್ದರು.  
ಹಾಸನ

ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಕ್ರಮ

ಪ್ರಸಿನ್ ಕೆ.ಆರ್

ಪ್ರಮುಖ ಮುಖ್ಯಾಂಶಗಳು

  • ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಕ್ರಮ
  • ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್ ಭರವಸೆ
  • ಹೊಯ್ಸಳ ನಗರ ಹಾಗೂ ಬೀರನಹಳ್ಳಿ ಕೆರೆ ಬಡಾವಣೆಗಳಿಗೆ ಭೇಟಿ ನೀಡಿ ಪರಿಶೀಲನೆ
ಹಾಸನ: ಹೊಯ್ಸಳ ನಗರ ಹಾಗೂ ಬೀರನಹಳ್ಳಿ ಕೆರೆ ಬಡಾವಣೆಗಳಿಗೆ ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್ ಮಂಗಳವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಡಾವಣೆಯಲ್ಲಿ ಮೂಲ ಸೌಕರ್ಯಗಳ ಕೊರತೆ ಸೇರಿದಂತೆ ಹಲವು ಸಮಸ್ಯೆಗಳಿವೆ ಎಂದು ಸ್ಥಳೀಯ ನಿವಾಸಿಗಳು ದೂರು ನೀಡಿದ ಹಿನ್ನೆಲೆಯಲ್ಲಿ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.
ಈ ವೇಳೆ ಒಳಚರಂಡಿ, ರಸ್ತೆ, ನೀರು ಸರಬರಾಜು ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಜನರು ಅಸಮಾಧಾನ ವ್ಯಕ್ತಪಡಿಸಿದರು. ಪರಿಶೀಲನೆಯ ಬಳಿಕ ಸಮಸ್ಯೆಗಳ ಶೀಘ್ರ ಪರಿಹಾರಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನಗರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಚನೆ ನೀಡಲಾಯಿತು. ಸಾರ್ವಜನಿಕರ ಸಮಸ್ಯೆಗಳಿಗೆ ಆದ್ಯತೆ ನೀಡುವಂತೆ ಹಾಗೂ ತುರ್ತು ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಪಾಲಿಕೆ ಆಯುಕ್ತ ಕೃಷ್ಣಮೂರ್ತಿ ಇತರರು ಇದ್ದರು.