ಕಾವ್ಯಶ್ರೀ ಚಾರಿಟೆಬಲ್ ಟ್ರಸ್ಟ್ ಹಾಗೂ ಬೆಂಗಳೂರು ಕರ್ನಾಟಕ ಮತ್ತು ದಿನೇಶ್ ಫೌಂಡೇಷನ್ ಸಹಯೋಗದಲ್ಲಿ ಇತ್ತೀಚೆಗೆ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸುವರ್ಣ ಕನ್ನಡ ರಾಜ್ಯೋತ್ಸವ ಹಾಗೂ ಕವಿ ಕಾವ್ಯ ಸಂಭ್ರಮ 2025 ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಅನುಪಮ ಸೇವೆಗಾಗಿ ಹಿರೀಸಾವೆ ಹೋಬಳಿಯ ಕನುವನಘಟ್ಟ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಡಿ.ಮಂಜುಳಾ ಅವರನ್ನು ಆದರ್ಶ ಶಿಕ್ಷಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಹಿರೀಸಾವೆ: ಕಾವ್ಯಶ್ರೀ ಚಾರಿಟೆಬಲ್ ಟ್ರಸ್ಟ್ ಹಾಗೂ ಬೆಂಗಳೂರು ಕರ್ನಾಟಕ ಮತ್ತು ದಿನೇಶ್ ಫೌಂಡೇಷನ್ ಸಹಯೋಗದಲ್ಲಿ ಇತ್ತೀಚೆಗೆ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸುವರ್ಣ ಕನ್ನಡ ರಾಜ್ಯೋತ್ಸವ ಹಾಗೂ ಕವಿ ಕಾವ್ಯ ಸಂಭ್ರಮ 2025 ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಅನುಪಮ ಸೇವೆಗಾಗಿ ಹಿರೀಸಾವೆ ಹೋಬಳಿಯ ಕನುವನಘಟ್ಟ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಡಿ.ಮಂಜುಳಾ ಅವರನ್ನು ಆದರ್ಶ ಶಿಕ್ಷಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಶ್ರೀ ಗುರು ಚರಂತಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕಾವ್ಯಶ್ರೀ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಡಾ.ಜಿ.ಶಿವಣ್ಣ, ದಿನೇಶ್ ಫೌಂಡೇಷನ್ ಅಧ್ಯಕ್ಷ ದಿನೇಶ್ ನಾಯ್ಕ್, ರಂಗಭೂಮಿ ಕಿರುತೆರೆ ನಟಿ ಕು. ಶ್ರೀದೇವಿ, ಶಿಕ್ಷಕಿ ಪಾರ್ವತಿ ಬಿ.ಎ, ಬೆಂಗಳೂರಿನ ವಕೀಲರ ಸಹಕಾರ ಸಂಘ ನಿಯಮಿತದ ಅಧ್ಯಕ್ಷ ನಂಜಪ್ಪ ಕಾಳೇಗೌಡ ಹಾಗೂ ಮುಂತಾದವರು ಹಾಜರಿದ್ದರು.