ಅರಕಲಗೂಡು ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಎಚ್.ಎನ್. ಕುಮಾರ್, ಸುಂದರ್, ಶ್ರೀನಿವಾಸ್, ಸತೀಶ್ ಇತರರಿದ್ದರು. 
ಹಾಸನ

ಹಡಪದ ಅಪ್ಪಣ್ಣ ಆದರ್ಶ ಅಳವಡಿಸಿಕೊಳ್ಳಿ

ಅರಕಲಗೂಡು:

ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ಇತ್ತೀಚೆಗೆ ಹಡಪದ ಅಪ್ಪಣ್ಣ ಜಯಂತಿ ಆಚರಿಸಲಾಯಿತು.

ತಹಸೀಲ್ದಾರ್ ಕೆ.ಸಿ.ಸೌಮ್ಯಾ ಮಾತನಾಡಿ, ಸಮಾಜದಲ್ಲಿ ಜಾತಿ ಬೇಧ ಮತ್ತು ಲಿಂಗ ತಾರತಮ್ಯ ಹೋಗಲಾಡಿಸಲು ಶ್ರಮಿಸಿದ ಮಹಾನ್ ಸಮಾಜ ಸುಧಾರಕ ಹಡಪದ ಅಪ್ಪಣ್ಣ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಸವಿತಾ ಸಮಾಜದ ಉಪಾಧ್ಯಕ್ಷ ಎನ್.ಎಚ್. ಕುಮಾರ್ ಮಾತನಾಡಿ, ಹಡಪದ ಅಪ್ಪಣ್ಣ ಅವರು ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಮಾನವೀಯ ಮೌಲ್ಯಗಳನ್ನು ಸಾರಿದ ಮಹಾನ್ ಸಂತರು. ಅವರ ಸಂದೇಶಗಳು ಇಂದಿನ ಸಮಾಜಕ್ಕೂ ಮಾರ್ಗದರ್ಶಿಯಾಗಿದ್ದು, ಸಮಾನತೆಯ ಸಮಾಜ ನಿರ್ಮಾಣಕ್ಕೆ ಅವರ ಚಿಂತನೆಗಳು ಪ್ರೇರಣೆಯಾಗಿವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಭೂ ದಾಖಲೆಗಳ ಇಲಾಖೆ ಸಹಾಯಕ ನಿರ್ದೇಶಕ ಸುಂದರ್, ಸೋಮಶೇಖರ್, ವಿಜಯಕುಮಾರ್, ತಾಲೂಕು ಸವಿತಾ ಸಮಾಜದ ಗೌರವಾಧ್ಯಕ್ಷ ಶ್ರೀನಿವಾಸ್, ಸಮಾಜದ ಮುಖಂಡರಾದ ಸತೀಶ್, ನವೀನ್, ದೇವರಾಜು, ಮಧು, ಸದಣ್ಣ, ಶೇಖರ್ ಇತರರಿದ್ದರು.