ಹಾಸನ ನಗರದ ನಿವೃತ್ತ ನೌಕರರ ಭವನದಲ್ಲಿ ಮಂಗಳವಾರ ನಡೆದ ಜಿಲ್ಲಾ ಸಮಾವೇಶದಲ್ಲಿ ಕಾರ್ಮಿಕ ಸಂಹಿತೆಗಳ ಅಪಾಯಗಳ ಕುರಿತ ಕಿರುಪುಸ್ತಕ ಬಿಡುಗಡೆ ಮಾಡಲಾಗಿತು. ಎಸ್.ವರಲಕ್ಷ್ಮೀ, ಧರ್ಮೇಶ್, ಎಂ.ಬಿ.ಪುಷ್ಪಾ, ಅರವಿಂದ, ಧರ್ಮರಾಜ್, ಎಚ್.ಆರ್.ನವೀನ್‌ಕುಮರ್ ಇತರರಿದ್ದರು. 
ಹಾಸನ

ಫೆ.12ರಂದು ಅಖಿಲ ಭಾರತ ಮುಷ್ಕರ

ಪ್ರಮುಖ ಮುಖ್ಯಾಂಶಗಳು

  • ಫೆ.12ರಂದು ಅಖಿಲ ಭಾರತ ಮುಷ್ಕರ
  • ಯಶಸ್ವಿಗೊಳಿಸಲು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ವರಲಕ್ಷ್ಮೀ ಕರೆ
ಹಾಸನ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತರುತ್ತಿರುವ ನೂತನ ಕಾರ್ಮಿಕ ನೀತಿಗಳು ಮತ್ತು ಖಾಸಗೀಕರಣದ ನಡೆಗಳು ದೇಶದ ಬಂಡವಾಳಗಾರರ ಹಿತಾಸಕ್ತಿಯನ್ನು ಕಾಪಾಡುತ್ತಿದ್ದು, ಕಾರ್ಮಿಕರನ್ನು ಆಧುನಿಕ ಗುಲಾಮಗಿರಿಗೆ ತಳ್ಳುತ್ತಿವೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ವರಲಕ್ಷ್ಮೀ ಆರೋಪಿಸಿದರು.
ಹಾಸನ ನಗರದ ನಿವೃತ್ತ ನೌಕರರ ಭವನದಲ್ಲಿ ಮಂಗಳವಾರ ನಡೆದ ಕಾರ್ಮಿಕ ಸಂಘಟನೆಗಳು ಮತ್ತು ಹಾಸನ ಜಿಲ್ಲಾ ಜನಪರ ಸಂಘಟನೆಗಳ ಜಿಲ್ಲಾ ಸಮಾವೇಶದಲ್ಲಿ ಮಾತನಾಡಿದ ಅವರು, ಫೆಬ್ರವರಿ 12ರಂದು ನಡೆಯಲಿರುವ ಅಖಿಲ ಭಾರತ ಮುಷ್ಕರವನ್ನು ಯಶಸ್ವಿಗೊಳಿಸುವಂತೆ ದುಡಿಯುವ ಜನತೆಗೆ ಕರೆ ನೀಡಿದರು.
ಪ್ರಸ್ತುತ ಆರ್ಥಿಕ ಮತ್ತು ಸಾಮಾಜಿಕ ಪರಿಸ್ಥಿತಿಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ಬಂಡವಾಳ ಮತ್ತು ಶ್ರಮದ ನಡುವಿನ ಹೋರಾಟ ತೀವ್ರಗೊಂಡಿದ್ದು, ಫೆಬ್ರವರಿ 12ರ ಮುಷ್ಕರವು ಕೇವಲ ಪ್ರತಿಭಟನೆಯಲ್ಲ, ಬದಲಾಗಿ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧದ ಪ್ರಬಲ ಜನಚಳವಳಿ ಎಂದು ತಿಳಿಸಿದರು.
ಸಭೆಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್, ಪ್ರಧಾನ ಕಾರ್ಯದರ್ಶಿ ಎಂ.ಬಿ.ಪುಷ್ಪಾ, ಖಜಾಂಚಿ ಅರವಿಂದ, ಎಐಟಿಯುಸಿ ಮುಖಂಡರಾದ ಧರ್ಮರಾಜ್, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಧ್ಯಕ್ಷ ಎಚ್.ಆರ್.ನವೀನ್‌ಕುಮರ್, ನಿವೃತ್ತ ಬ್ಯಾಂಕ್ ನೌಕರರ ಸಂಘದ ಪರಮಶಿವಯ್ಯ, ಎಲ್‌ಐಸಿ ನೌಕರರ ಸಂಘದ ಮಂಜುನಾಥ್, ಹಿರಿಯ ದಲಿತ ಮುಖಂಡ ರಾಜಶೇಖರ್ ಇತರರಿದ್ದರು.
ಇದೇ ಸಂದರ್ಭದಲ್ಲಿ ಕಾರ್ಮಿಕ ಸಂಹಿತೆಗಳ ಅಪಾಯಗಳ ಕುರಿತ ಕಿರುಪುಸ್ತಕ ಬಿಡುಗಡೆ ಮಾಡಲಾಯಿತು.