ಆಲೂರು ತಾಲೂಕು ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ಮತ್ತು ತಾಲೂಕು ಆಡಳಿತ ಆಲೂರು ವತಿಯಿಂದ ಹಮ್ಮಿಕೊಂಡಿದ್ದ ಸ್ವಾತಂತ್ರ್ಯೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಯಿತು. ಮಲ್ಲಿಕಾರ್ಜುನ್ , ಇ.ಒ ಸುಬ್ರಹ್ಮಣ್ಯ ಶರ್ಮ ಇತರರಿದ್ದರು.
ಮಹನೀಯರ ಹೋರಾಟ, ತ್ಯಾಗ, ಬಲಿದಾನದ ಪ್ರತಿಫಲವಾಗಿ ನಮ್ಮ ದೇಶವು ಬ್ರಿಟಿಷರ ದಾಸ್ಯದಿಂದ ಮುಕ್ತವಾಗಿ ಸ್ವಾತಂತ್ರ್ಯ ಗಳಿಸಿತು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ತಾಲೂಕು ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ಮತ್ತು ತಾಲೂಕು ಆಡಳಿತ ಆಲೂರು ವತಿಯಿಂದ ಹಮ್ಮಿಕೊಂಡಿದ್ದ ಸ್ವಾತಂತ್ರ್ಯೋತ್ಸವದಲ್ಲಿ ಮಾತನಾಡಿದರು. ಈ ದೇಶದ ಗಾಳಿ, ನೀರು, ಬೆಳಕು ಮತ್ತು ಪ್ರಕೃತಿಯನ್ನು ಅನುಭವಿಸುತ್ತಿರುವ ಪ್ರತಿಯೊಬ್ಬ ನಾಗರಿಕನು ಕೂಡ ದೇಶ ಮೊದಲು ಎಂಬ ಭಾವನೆ ಮೂಡಬೇಕು ಎಂದು ತಿಳಿಸಿದರು.
ಸ್ವಾತಂತ್ರ್ಯ ಪಡೆದ ಕಾಲದಲ್ಲಿ ಭಾರತ ದೇಶವು ಯಾವುದೇ ವಿಚಾರಗಳಿಗೆ ಬೇರೆ ದೇಶಗಳನ್ನು ಅವಲಂಬಿಸುವ ಪರಿಸ್ಥಿತಿ ಇತ್ತು. ಆದರೆ ಬದಲಾದ ಸನ್ನಿವೇಶಗಳಲ್ಲಿ ಬೇರೆ ದೇಶಗಳು ಭಾರತವನ್ನು ಅವಲಂಬಿಸುವ ಸನ್ನಿವೇಶ ಸೃಷ್ಟಿಯಾಗಿದೆ ಎಂದು ಶ್ಲಾಸಿದರು.
ತಾಲೂಕು ದಂಡಾಧಿಕಾರಿ ಮಲ್ಲಿಕಾರ್ಜುನ್, ತಾಪಂ ಇಒ ಸುಬ್ರಹ್ಮಣ್ಯ ಶರ್ಮ, ಬಿಇಒ ಕೃಷ್ಣೇಗೌಡ, ತಾಲೂಕು ಪಿಆರ್‌ಇಡಿಎಇಇ ರಮೇಶ್, ಪ.ಪಂ ಮುಖ್ಯಾಧಿಕಾರಿ ಮಂಜುನಾಥ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮನು, ತಾಲೂಕು ಜೆಡಿಎಸ್ ಕೆ.ಎಸ್ ಮಂಜೇಗೌಡ, ಬಿಜೆಪಿ ಅಧ್ಯಕ್ಷೆ ಉಮಾ ರವಿಪ್ರಕಾಶ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯಾಧ್ಯಕ್ಷ ಶಂಕರಾಚಾರ್, ದಲಿತ ಮುಖಂಡರಾದ ರಂಗಯ್ಯ, ಬಸವರಾಜ್, ವೀರಶೈವ ಲಿಂಗಾಯತ ಸಮಾಜದ ಉಪಾಧ್ಯಕ್ಷ ಡಿ.ಎಸ್ ಜಯಣ್ಣ, ಸಹ ಕಾರ್ಯದರ್ಶಿ ಡಾ.ಜಯರಾಜ್, ಬಿಜೆಪಿ ವಕ್ತಾರ ಮಾವನೂರು ಮೋಹನ್, ಲಯನ್ ಸೇವಾ ಸಂಸ್ಥೆಯ ಮಾಜಿ ಅಧ್ಯಕ್ಷ ನವೀನ್ ದಡದಲ್ಲಿ, ಪ್ರವೀಣ್ ಸೇರಿದಂತೆ ತಾಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಮತ್ತು ಶಾಲಾ ಮಕ್ಕಳು ಉಪಸ್ಥಿತರಿದ್ದರು.