ಆಲೂರಿನ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಗೇಕರವಳ್ಳಿ ಬಸವರಾಜ್ ಮಾತನಾಡಿದರು. 
ಹಾಸನ

ಅಂಬೇಡ್ಕರ್ ವಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿ

ಪ್ರಮುಖ ಮುಖ್ಯಾಂಶಗಳು

  • ತಹಸೀಲ್ದಾರ್ ಕಚೇರಿ ಆವರಣ
  • ತಾಲೂಕು ದಲಿತ ಸಂಘರ್ಷ ಸಮಿತಿ ಸಂಚಾಲಕ ಬಸವರಾಜ್ ಗೇಕರವಳ್ಳಿ
ಆಲೂರು: ತಹಸೀಲ್ದಾರ್ ಕಚೇರಿ ಆವರಣದಲ್ಲಿ ಜ.7ರಂದು ಭೀಮ ಕೋರೆಗಾಂವ್ ಕದನ ವಿಜಯೋತ್ಸವ ಆಚರಣೆ ಮಾಡಲು ನಿರ್ಧರಿಸಲಾಗಿದ್ದು, ಎಲ್ಲ ಅಂಬೇಡ್ಕರ್ ವಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ತಾಲೂಕು ದಲಿತ ಸಂಘರ್ಷ ಸಮಿತಿ ಸಂಚಾಲಕ ಬಸವರಾಜ್ ಗೇಕರವಳ್ಳಿ ಮನವಿ ಮಾಡಿದರು.
ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ವಿಜಯೋತ್ಸವ ಆಚರಣೆ ಮಾಡಲು ತೀರ್ಮಾನಿಸಲಾಗಿದೆ. ಕಾರ್ಯಕ್ರಮವನ್ನು ಶಾಸಕ ಸಿಮೆಂಟ್ ಮಂಜು ಉದ್ಘಾಟನೆ ಮಾಡಲಿದ್ದು, ಮುಖ್ಯ ಭಾಷಣಕಾರರಾಗಿ ಪ್ರಜಾ ಪರಿವರ್ತನಾ ವೇದಿಕೆಯ ರಾಜ್ಯಾಧ್ಯಕ್ಷ ಗೋಪಾಲ್ ಆಗಮಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಎಚ್.ಕೆ.ಕುಮಾರಸ್ವಾಮಿ, ಡಿ.ಮಲ್ಲೇಶ್, ಕಾಂಗ್ರೆಸ್ ಮುಖಂಡ ಮುರಳಿ ಮೋಹನ್ ಸೇರಿದಂತೆ ಮುಂತಾದವರು ಆಗಮಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಹಿರಿಯ ದಲಿತ ಮುಖಂಡ ಅಜ್ಜೇನಳ್ಳಿ ರಂಗಯ್ಯ ಮಾತನಾಡಿ, ಅಂದು ಬೆಳಗ್ಗೆ 10ರಿಂದ ಒಂದು ಗಂಟೆವರೆಗೆ ವೀರಶೈವ ಕಲ್ಯಾಣ ಮಂಟಪದಿಂದ ತಾಲೂಕು ಆಡಳಿತ ಸೌಧದ ಆವರಣದವರೆಗೆ ಅದ್ದೂರಿ ಮೆರವಣಿಗೆ ನಡೆಯಲಿದೆ ಎಂದರು.
ತಾಲೂಕು ದಲಿತ ಸಂಘರ್ಷ ಸಮಿತಿ ಉಪಾಧ್ಯಕ್ಷ ಅಜ್ಜೇನಳ್ಳಿ ಲೋಕೇಶ್, ಕಾರ್ಯದರ್ಶಿಗಳಾದ ಬೈರೇಶ್, ಹರೀಶ್ ಸಹ ಕಾರ್ಯದರ್ಶಿ ಧರ್ಮ, ಖಜಾಂಚಿ ಚಂದ್ರು ಇತರರು ಸುದ್ದಿಗೋಷ್ಠಿಯಲ್ಲಿದ್ದರು.