ನವದೆಹಲಿಯಲ್ಲಿ ಕೇಂದ್ರ ಸರ್ಕಾರದ ಸಂವಹನ ಸಚಿವ ಜ್ಯೋತಿರಾದಿತ್ಯ ಎಂ.ಸಿಂಧ್ಯಾ ಅವರನ್ನು ಸಂಸದ ಶ್ರೇಯಸ್ ಎಂ.ಪಟೇಲ್ ಇತ್ತೀಚೆಗೆ ಭೇಟಿಯಾಗಿ ಹಾಸನ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮನವಿ ಸಲ್ಲಿಸಿದರು. 
ಹಾಸನ

ಅಂಚೆ ಕಚೇರಿ ಕಟ್ಟಡಗಳ ನಿರ್ಮಾಣಕ್ಕೆ ಅನುಮೋದನೆ ನೀಡಿ

ಪ್ರಮುಖ ಮುಖ್ಯಾಂಶಗಳು

  • ಅಂಚೆ ಕಚೇರಿ ಕಟ್ಟಡಗಳ ನಿರ್ಮಾಣಕ್ಕೆ ಅನುಮೋದನೆ ನೀಡಿ
  • ಕೇಂದ್ರ ಸಚಿವ ಜ್ಯೋತಿರಾದಿತ್ಯ ಎಂ.ಸಿಂಧ್ಯಾಗೆ ಸಂಸದ ಶ್ರೇಯಸ್ ಎಂ.ಪಟೇಲ್ ಮನವಿ
ಹಾಸನ: ನವದೆಹಲಿಯಲ್ಲಿ ಕೇಂದ್ರ ಸರ್ಕಾರದ ಸಂವಹನ ಸಚಿವ ಜ್ಯೋತಿರಾದಿತ್ಯ ಎಂ.ಸಿಂಧ್ಯಾ ಅವರನ್ನು ಸಂಸದ ಶ್ರೇಯಸ್ ಎಂ.ಪಟೇಲ್ ಇತ್ತೀಚೆಗೆ ಭೇಟಿಯಾಗಿ ಹಾಸನ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮನವಿ ಸಲ್ಲಿಸಿದರು.
ಹಾಸನ ಅಂಚೆ ವಿಭಾಗದಲ್ಲಿ 17 ಖಾಲಿ ಜಾಗಗಳು ಲಭ್ಯವಿದ್ದರೂ ಅನೇಕ ಅಂಚೆ ಕಚೇರಿಗಳು ಇನ್ನೂ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ತಾಲೂಕು ಕೇಂದ್ರವಾದ ಆಲೂರಿನಲ್ಲಿ ಅಂಚೆ ಕಚೇರಿ ಕಟ್ಟಡ ನಿರ್ಮಾಣ ಸೇರಿದಂತೆ, ಹಾಸನ (ಎನ್.ಆರ್.ಬಡಾವಣೆ), ಹರಳಹಳ್ಳಿ, ಬಾಗೂರು, ಗೊರೂರು, ರಾಮನಾಥಪುರ, ನುಗ್ಗೇಹಳ್ಳಿ, ಶಾಂತಿಗ್ರಾಮ, ಕಂದಲಿ, ದುದ್ದ, ಯಸಳೂರು, ಬಿಕ್ಕೋಡು, ಪಾಳ್ಯ, ಹಾನುಬಾಳು, ಹಗರೆ ಹಾಗೂ ಕೆ.ಹೊಸಕೋಟೆಗಳಲ್ಲಿ ಸಬ್ ಪೋಸ್ಟ್ ಕಚೇರಿ ಕಟ್ಟಡಗಳಿಗೆ ಅನುಮೋದನೆ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದರು.
ಇದೇ ವೇಳೆ ಜಿಲ್ಲೆಯ ಮಲೆನಾಡು ಭಾಗದಲ್ಲಿ ಹೆಚ್ಚುತ್ತಿರುವ ಮಾನವ-ಕಾಡಾನೆ ಸಂಘರ್ಷವನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರ ಸುರಕ್ಷತೆಗೆ ಅಗತ್ಯವಾದ ಮೊಬೈಲ್ ನೆಟ್‌ವರ್ಕ್ ವ್ಯವಸ್ಥೆ ಕಲ್ಪಿಸುವಂತೆ ಕೋರಿದರು.
ಸಾರ್ವಜನಿಕ ಸುರಕ್ಷತೆ ಮತ್ತು ಪರಿಣಾಮಕಾರಿ ಆಡಳಿತದ ದೃಷ್ಟಿಯಿಂದ 4ಜಿ ಸ್ಯಾಚುರೇಷನ್ ಯೋಜನೆಯಡಿ ಮೊಬೈಲ್ ದೂರಸಂಪರ್ಕ ಮೂಲಸೌಕರ್ಯ ಒದಗಿಸುವಂತೆ ಒತ್ತಾಯಿಸಿದ್ದು, ಬೇಲೂರು ತಾಲೂಕಿನ ದೊಡ್ಡಸಾಲಾವರ, ಹೊಳಲು, ಬ್ಯಾದನೆ, ಕನಹಳ್ಳಿ, ನೆರ್ಲಮಕ್ಕಿ, ಅಂಕಿಹಳ್ಳಿ, ಸಕಲೇಶಪುರ ತಾಲೂಕಿನ ಈಚಲಬೀಡು, ಹಿರಿದನಹಳ್ಳಿ ಹಾಗೂ ಆಲೂರು ತಾಲೂಕಿನ ಮಾದಿಹಳ್ಳಿ ಮತ್ತು ಹರಿಹಳ್ಳಿಯಲ್ಲಿ ಮೊಬೈಲ್ ಟವರ್ ಅಳವಡಿಸುವಂತೆ ಮನವಿ ಸಲ್ಲಿಸಿದರು.