ಚನ್ನರಾಯಪಟ್ಟಣ ತಾಲೂಕು ಆಡಳಿತ ಸೌಧದ ಆವರಣದಲ್ಲಿ ಸ್ಥಾಪಿಸಿರುವ ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಉದ್ಘಾಟನೆಗೆ ಒತ್ತಾಯಿಸಿ ತಾಲೂಕು ಬಿಜೆಪಿ ಮುಖಂಡ ನಂಜುಂಡ ಮೈಮ್ ಸೇರಿದಂತೆ ಬಿಜೆಪಿ ಮುಖಂಡರು ಅರಬೆತ್ತಲೆ ಚಳವಳಿಯ ಬಿತ್ತಿ ಪತ್ರ ಬಿಡುಗಡೆ ಮಾಡಿದರು.
- ಅಂಬೇಡ್ಕರ್ ಪ್ರತಿಮೆ ಅನಾವರಣ ವಿಳಂಬಕ್ಕೆ ಬಿಜೆಪಿ ವಿರೋಧ
ಚನ್ನರಾಯಪಟ್ಟಣ:
ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆ ಅನಾವರಣ ಮಾಡಲು ವಿಳಂಬ ಮಾಡುತ್ತಿರುವ ತಾಲೂಕು ಆಡಳಿತ ವಿರುದ್ಧ ಆ.25ರಂದು ಅರಬೆತ್ತಲೆ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿಯ ಕಲೆ ಮತ್ತು ಸಾಹಿತ್ಯ ಪ್ರಕೋಷ್ಠದ ಜಿಲ್ಲಾ ಸಂಚಾಲಕ ನಂಜುಂಡ ಮೈಮ್ ತಿಳಿಸಿದರು.
ತಾಲೂಕು ಆಡಳಿತ ಸೌಧದ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್‌ಪ್ರತಿಮೆ ಸ್ಥಾಪಿಸಿ 10 ತಿಂಗಳು ಕಳೆದರೂ ಉದ್ಘಾಟನೆ ಮಾಡಿಲ್ಲ. ಈ ಬಗ್ಗೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರೂ ತಾಲೂಕು ಆಡಳಿತ ಕಣ್ಣೊರೆಸುವ ತಂತ್ರ ಅನುಸರಿಸುತ್ತಿದೆ ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ಚಳವಳಿಯಲ್ಲಿ ತಾಲೂಕಿನ ದಲಿತ ಸಂಘಟನೆಗಳು ಸೇರಿದಂತೆ ಹಲವು ಪ್ರಗತಿಪರ ಸಂಘಟನೆಗಳು ಭಾಗಿಯಾಗಲಿವೆ ಎಂದರು.
ಬಿಜೆಪಿ ಮುಖಂಡರಾದ ಶ್ರವಣಬೆಳಗೊಳ ಮಂಡಲದ ಅಧ್ಯಕ್ಷ ಪರಮ ಗಂಗಾಧರ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್, ಗನ್ನಿ ವಿಶ್ವನಾಥ್, ಮುಖಂಡರಾದ ಮಣಿಕಂಠ, ಸಿ.ಜಿ.ಕುಮಾರ್ ಭಾಗವಹಿಸಿದ್ದರು.