ಪುರಸಭೆ ಪೌರಕಾರ್ಮಿಕರಿಗೆ ಸಮವಸ್ತ್ರ ಹಾಗೂ ವಿವಿಧ ಪರಿಕರಗಳನ್ನು ವಿತರಿಸುತ್ತಿರುವ ಪುರಸಭೆ ಅಧ್ಯಕ್ಷ ಅಕ್ರಂ ಶರೀಫ್ ಇತರರಿದ್ದರು.
ಗಡಿಯಲ್ಲಿ ಹೇಗೆ ಸೈನಿಕರು ನಮ್ಮನ್ನು ಕಾಪಾಡುತ್ತಾರೋ ಹಾಗೆ ಪಟ್ಟಣದ ಸ್ವಚ್ಛತೆಯ ಮೂಲಕ ನಮ್ಮ ಆರೋಗ್ಯ ಕಾಪಾಡುತ್ತಿರುವ ಪೌರಕಾರ್ಮಿಕರ ಸೇವೆ ಶ್ಲಾಘನೀಯವಾದದ್ದು ಎಂದು ಪುರಸಭೆ ಅಧ್ಯಕ್ಷ ಅಕ್ರಂ ಶರೀಫ್ ಮೆಚ್ಚುಗೆ ವ್ಯಕ್ತಪಡಿಸಿದರು.
ಪುರಸಭೆ ಕಚೇರಿಯಲ್ಲಿ ಪೌರಕಾರ್ಮಿಕರಿಗೆ ಮಂಗಳವಾರ ಶೂಸ್, ರೇನ್ ಕೋಟ್, ಗ್ಲೌವ್ಸ್ ಹಾಗೂ ಹೊರಗುತ್ತಿಗೆ ನೌಕರರಿಗೆ ಸಮವಸ್ತ್ರ ವಿತರಿಸಿ ಮಾತನಾಡಿದ ಅವರು, ಮಳೆ, ಚಳಿ, ಬಿಸಿಲೆನ್ನದೇ ತಮ್ಮ ಆರೋಗ್ಯವನ್ನು ಲೆಕ್ಕಿಸದೆ ಜನತೆಯ ಆರೋಗ್ಯ ಕಾಪಾಡುವುದಕ್ಕಾಗಿ ಬೆಳಗ್ಗೆಯಿಂದ ಸಂಜೆಯವರೆಗೂ ಸ್ವಚ್ಛತೆಗಾಗಿ ದುಡಿಯುವ ಪೌರಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತೆ ನಮ್ಮ ಮೊದಲ ಆದ್ಯತೆ ನೀಡಬೇಕಿದೆ. ಅವರಿಗೆ ಬೇಕಾದ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವುದು ನಮ್ಮ ಕರ್ತವ್ಯವಾಗಿದೆ. ಆದ್ದರಿಂದ ನೌಕರರು ಸಮವಸ್ತ್ರ ಹಾಗೂ ಸುರಕ್ಷಾ ಕಿಟ್‌ಗಳನ್ನು ಕಡ್ಡಾಯವಾಗಿ ಬಳಸಿಕೊಂಡು ಕೆಲಸದಲ್ಲಿ ತೊಡಗಬೇಕು ಎಂದರು.
ಪುರಸಭಾ ಮುಖ್ಯಾಧಿಕಾರಿ ಬಸವರಾಜ್ ಸಿಗ್ಗಾವಿ, ಸದಸ್ಯ ಶೈಲೇಶ್, ಆರೋಗ್ಯಾಧಿಕಾರಿ ಜ್ಯೋತಿ ಸೇರಿದಂತೆ ಇತರರಿದ್ದರು.