Bike accident 
ಹಾಸನ

ಅಪಘಾತದಲ್ಲಿ ಬೈಕ್ ಸವಾರ ಸಾವು

ಹಾಸನ: ಚನ್ನರಾಯಪಟ್ಟಣದ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸುನಿಲ್ ಕುಮಾರ್ (37), ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಜು.18ರ ರಾತ್ರಿ 10 ಗಂಟೆ ಸುಮಾರಿಗೆ ಆಲೂರು ತಾಲೂಕಿನ ಭೈರಾಪುರ ಗ್ರಾಮದ ಸುನಿಲ್ ಕುಮಾರ್ ಅವರು ಸ್ನೇಹಿತ ಪ್ರಕಾಶ್ ಅವರೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಕಾರು ಯಾವುದೇ ಸೂಚನೆ ನೀಡದೆ ಇದ್ದಕ್ಕಿದ್ದಂತೆ ಯೂಟರ್ನ್ ಮಾಡಿದ್ದರಿಂದ ಬೈಕ್‌ಗೆ ಡಿಕ್ಕಿಯಾಗಿದೆ. ತೀವ್ರ ಗಾಯಗೊಂಡ ಸುನಿಲ್ ಕುಮಾರ್ ಹಾಗೂ ಪ್ರಕಾಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆಗೆ ಸ್ಪಂದಿಸದೆ ಸುನಿಲ್ ಕುಮಾರ್ ಮೃತಪಟ್ಟರು.
ಪ್ರಕಾಶ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಚನ್ನರಾಯಪಟ್ಟಣ ಸಂಚಾರಿ ಪೊಲೀಸರು ಅಜಾಗರೂಕ ಚಾಲನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.