ರ‌್ಯಾಗಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನ ನಗರದ ಚಿಕ್ಕಹೊನ್ನೇನಹಳ್ಳಿಯ ಪಶು ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳ ಎರಡು ಗುಂಪಿನ ನಡುವೆ ನಡೆದ ಮಾರಾಮಾರಿ ದೃಶ್ಯ.
- ರ‌್ಯಾಗಿಂಗ್ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ಮಾರಾಮಾರಿ
- ಪಶು ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ಪರಸ್ಪರ ಹೊಡೆದಾಟ
ಹಾಸನ: ನಗರದ ಚಿಕ್ಕಹೊನ್ನೇನಹಳ್ಳಿಯ ಪಶು ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳ ಎರಡು ಗುಂಪಿನ ನಡುವೆ ಇತ್ತೀಚೆಗೆ ರ‌್ಯಾಗಿಂಗ್ ವಿಚಾರಕ್ಕೆ ಮಾರಾಮಾರಿ ನಡೆದಿದೆ.
ಹಾಸ್ಟೆಲ್‌ನ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರ‌್ಯಾಗಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಕಿರಿಯ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಈ ವೇಳೆ ಹಾಸ್ಟೆಲ್‌ನಲ್ಲೇ ಪರಸ್ಪರ ಕೈ ಕೈ ಮಿಲಾಯಿಸಿದ್ದಾರೆ. ಗಲಾಟೆಯಲ್ಲಿ ಹಲವು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ದೃಶ್ಯಾವಳಿ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಬಡಾವಣೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಾವುದೇ ಪ್ರಕರಣ ದಾಖಲಾಗಿಲ್ಲ.