ಚನ್ನರಾಯಪಟ್ಟಣದ ಪಿಎಂಸಿ ಶಾಲೆಯಲ್ಲಿ ನಗರೋತ್ಥಾನ ಯೋಜನೆಯ ಅನುದಾನದಲ್ಲಿ ನೂತನವಾಗಿ ನಿರ್ಮಿಸಿರುವ ಶೌಚಗೃಹಗಳನ್ನು ಶಾಸಕ ಸಿ.ಎನ್.ಬಾಲಕೃಷ್ಣ ಉದ್ಘಾಟಿಸಿದರು. ಎಚ್.ಎನ್.ದೀಪಾ, ಕೆ.ಎನ್.ಅನಿಲ್, ಉಮಾಶಂಕರ್, ಶಾಮಿಯಾನ ರಘು, ರಮೇಶ್ ಇತರರು ಇದ್ದರು.
ಚನ್ನರಾಯಪಟ್ಟಣ: ಆರೋಗ್ಯದಿಂದ ಇರಬೇಕು ಎಂದರೆ ಮೊದಲು ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು.
ಪಟ್ಟಣದ ಬಿಇಒ ಕಚೇರಿ ಹಿಂಭಾಗದಲ್ಲಿರುವ ಪಿಎಂಶ್ರೀ ಶಾಲೆಯಲ್ಲಿ ನಗರೋತ್ಥಾನ ಯೋಜನೆಯ ಅನುದಾನದಲ್ಲಿ 14 ಲಕ್ಷ ರೂ.ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಪ್ರತ್ಯೇಕ ಶೌಚಗೃಹವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿ, ಮನುಷ್ಯನಿಗೆ ಆರೋಗ್ಯವೇ ದೊಡ್ಡ ಭಾಗ್ಯ. ಆರೋಗ್ಯ ಉತ್ತಮವಾಗಿರಲು ನೈರ್ಮಲ್ಯಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಸಲಹೆ ನೀಡಿದರು.
ಖಾಸಗಿ ಶಾಲೆಗಳಿಗೆ ಕಮ್ಮಿ ಇಲ್ಲದಂತೆ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಮೂಲಸೌಕರ್ಯ ಅತಿ ಮುಖ್ಯ. ಈ ನಿಟ್ಟಿನಲ್ಲಿ ಗಂಡು ಮಕ್ಕಳು ಹಾಗೂ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶೌಚಗೃಹ ನಿರ್ಮಾಣ ಮಾಡಲಾಗಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್.ದೀಪಾ, ಕ್ಷೇತ್ರ ಸಂಪನ್ಮೂಲ ಸಮನ್ವಯಧಿಕಾರಿ ಕೆ.ಎನ್.ಅನಿಲ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಉಮಾಶಂಕರ್, ಪುರಸಭಾ ಮುಖ್ಯಾಧಿಕಾರಿ ಆರ್.ಯತೀಶ್ ಕುಮಾರ್, ಎಸ್‌ಡಿ ಎಂಸಿ ಅಧ್ಯಕ್ಷ ರಮೇಶ್, ಉಪಾಧ್ಯಕ್ಷೆ ವಿದ್ಯಾರಾಣಿ, ಮುಖ್ಯ ಶಿಕ್ಷಕ ಬಿ.ಆರ್.ರಮೇಶ್ ಲಿಂಗರಾಜು, ಶಿಕ್ಷಕರ ಸಂಘದ ಅಧ್ಯಕ್ಷ ರಮೇಶ್, ಮುಖಂಡರಾದ ಶಾಮಿಯಾನ ರಘು ಇತರರು ಇದ್ದರು.