ಬೇಲೂರು-ಮುಡಿಗೆರೆ ರಸ್ತೆಯ ವೈಡಿಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಂಬಾಗದ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಬಾಗಿದ ಬೃಹತ್ ಗಾತ್ರದ ಮರದ ಕೊಂಬೆಗಳು 
ಹಾಸನ

ಹೆದ್ದಾರಿಯಲ್ಲಿನ ಮರದ ಕೊಂಬೆಗಳನ್ನು ತೆರವುಗೊಳಿಸಿ

ಪ್ರಜ್ವಲ್.ಎನ್

ಪ್ರಮುಖ ಮುಖ್ಯಾಂಶಗಳು

  • ಸಾರ್ವಜನಿಕರಿಂದ ಅಧಿಕಾರಿಗಳಿಗೆ ಒತ್ತಾಯ
ಬೇಲೂರು: ಬೇಲೂರು-ಮುಡಿಗೆರೆ ರಸ್ತೆಯ ವೈಡಿಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಂಬಾಗದ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಬಾಗಿದ ಬೃಹತ್ ಗಾತ್ರದ ಮರದ ಕೊಂಬೆಗಳನ್ನು ತೆರವು ಗೊಳಿಸುವಂತೆ ಈ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರು ಹಾಗೂ ಸಾರ್ವಜನಿಕರು ಸಂಬಂಧಿಸಿದ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಬೇಲೂರು ಪಟ್ಟಣದಿಂದ ಮೂಡಿಗೆರೆಯತ್ತ ಹಾಗೂ ಮೂಡಿಗೆರೆ ಬಾಗದಿಂದ ಬೇಲೂರಿಗೆ ಪ್ರತಿನಿತ್ಯ ಸಾವಿರಾರು ಜನರು ವಿವಿಧ ವಾಹನಗಳಲ್ಲಿ ಮೂಡಿಗೆರೆ-ಬೇಲೂರು ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಸಂಚರಿಸುತ್ತಾರೆ. ವಿಶೇಷವೆಂದರೆ ಬೇಲೂರಿಗೆ ಆಗಮಿಸುವ ಪ್ರವಾಸಿಗರು ಬೇಲೂರು-ಹಳೇಬೀಡು ದೇಗುಲ ವೀಕ್ಷಿಸಿದ ನಂತರ ಕಳಸ-ಹೊರನಾಡು ಹಾಗೂ ಧರ್ಮಸ್ಥಳ, ಸುಬ್ರಹ್ಮಣ್ಯ ಮತ್ತು ಮಂಗಳೂರು-ಉಡುಪಿಯತ್ತ ಇದೇ ರಸ್ತೆಯಲ್ಲಿ ತೆರಳುತ್ತಾರೆ. ಆದರೆ ಪಟ್ಟಣದ ಹೊರ ವಲಯದಲ್ಲಿರುವ ವೈಡಿಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಂಭಾಗದಿಂದ ಕೇವಲ 200 ಮೀಟರ್ ಅಂತರದಲ್ಲಿರುವ ರಸ್ತೆ ಬದಿಯಲ್ಲಿರುವ ಮರಗಳ ಪೈಕಿ ಒಂದೆರಡು ಬೃಹತ್ ಗಾತ್ರದ ಮರದ ಕೊಂಬೆಗಳು ರಸ್ತೆಗೆ ಬಾಗಿದೆ. ಗಾಳಿ ಮಳೆ ಸಂದರ್ಭ ರಸ್ತೆಯಲ್ಲಿ ಸಂಚರಿಸುವಾ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ಅಪಘಾತವಾದರೆ ಯಾರು ಹೊಣೆ
ಅರಣ್ಯ ಇಲಾಖೆ ಅಥವಾ ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಬರುತ್ತದೆಯೇ ಎಂಬುದನ್ನು ಅರಿತು ಯಾವುದೇ ಅನಾಹುತ ಸಂಭವಿಸುವ ಮುನ್ನ ಸಂಬಂಧಿಸಿದ ಅಧಿಕಾರಿಗಳು ತುರ್ತಾಗಿ ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.