ಅರಕಲಗೂಡು ತಾಲೂಕಿನ ಗಂಗನಾಳು ಹುಲ್ಲಂಗಾಲ ಗ್ರಾಮಗಳ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ.ಮಂಜು ಭೂಮಿಪೂಜೆ ನೆರವೇರಿಸಿದರು. ಎಂ.ಎಸ್. ಯೋಗೇಶ್, ನಟೇಶ್, ಕೃಷ್ಣಪ್ಪ, ಮಲ್ಲೇಶ್ ಇತರರಿದ್ದರು. 
ಹಾಸನ

ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ

ಲೋಕೇಶ್ ಮನು. ಡಿ

ಅರಕಲಗೂಡು:

ತಾಲೂಕಿನ ಕಸಬಾ ಹೋಬಳಿಯ ಗಂಗನಾಳು ಹುಲ್ಲಂಗಾಲ ಗ್ರಾಮಗಳ ಸಂಪರ್ಕ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ.ಮಂಜು ಇತ್ತೀಚೆಗೆ ಭೂಮಿಪೂಜೆ ನೆರವೇರಿಸಿದರು.

ನಂತರ ಮಾತನಾಡಿ, ಮುಖ್ಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದರಿಂದ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ರಸ್ತೆ ಅಭಿವೃದ್ಧಿಪಡಿಸುವಂತೆ ಗ್ರಾಮಸ್ಥರ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿ 60 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಗ್ರಾಮಸ್ಥರ ಬಹುದಿನಗಳ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಒದಗಿಸಲಾಗಿದೆ ಎಂದರಲ್ಲದೆ, ಕಾಮಗಾರಿಯನ್ನು ಗುಣಮಟ್ಟ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಇದೇ ವೇಳೆ ಗ್ರಾಮಸ್ಥರು ದೇವಸ್ಥಾನದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು. ಇದಕ್ಕೆ ಸ್ಪಂದಿಸಿದ ಶಾಸಕರು, ಮುಂದಿನ ದಿನಗಳಲ್ಲಿ ದೇವಸ್ಥಾನದ ಅಭಿವೃದ್ಧಿಗೆ ಅಗತ್ಯ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು.
ತಾಪಂ ಮಾಜಿ ಅಧ್ಯಕ್ಷ ಎಂ.ಎಸ್. ಯೋಗೇಶ್, ನರಸೇಗೌಡ, ಗ್ರಾಪಂ ಮಾಜಿ ಅಧ್ಯಕ್ಷರಾದ ನಟೇಶ್, ಕೃಷ್ಣಪ್ಪ, ಮುಖಂಡರಾದ ಸ್ವಾಮಿ, ಸುರೇಶ್, ಮಲ್ಲೇಶ್, ಗ್ರಾಮಸ್ಥರು ಇದ್ದರು.