ತಾಲೂಕಿನ ಅಜ್ಜೇನಹಳ್ಳಿ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಎಚ್.ಕೆ.ಸುರೇಶ್ ಭೂಮಿ ಪೂಜೆ ನೆರವೇರಿಸಿದರು. ಗ್ರಾಪಂ ಅಧ್ಯಕ್ಷೆ ನವಿನಾ ಅಣ್ಣಪ್ಪ, ಗ್ರಾಮಸ್ಥರಾದ ನಾಗರಾಜ್ ಪರಮೇಶ್, ದೇವರಾಜ್, ಜಯಪ್ಪ, ಮಂಜುನಾಥ್, ನಾಗಮ್ಮ ಸೇರಿದಂತೆ ಇತರರಿದ್ದರು.  
ಹಾಸನ

ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ

ಕಿರಣ್ ಗೌಡ.ಜಿ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎಚ್.ಕೆ.ಸುರೇಶ್‌ರಿಂದ ಭೂಮಿ ಪೂಜೆ
ಬೇಲೂರು: ತಾಲೂಕಿನ ಇಬ್ಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಜ್ಜೇನಹಳ್ಳಿ ಗ್ರಾಮದಿಂದ ಮುಖ್ಯ ರಸ್ತೆವರೆಗಿನ 30 ಲಕ್ಷ ರೂ.ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಎಚ್.ಕೆ.ಸುರೇಶ್ ಮಂಗಳವಾರ ಭೂಮಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಶಾಸಕರು, ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, ಉತ್ತಮ ರಸ್ತೆ ಸಂಪರ್ಕದಿಂದ ಗ್ರಾಮಗಳ ಆರ್ಥಿಕ, ಸಾಮಾಜಿಕ ಅಭಿವೃದ್ಧಿ ಸಾಧ್ಯವಾಗಲಿದೆ. ಅಲ್ಲದೆ ಈ ರಸ್ತೆ ಅಭಿವೃದ್ಧಿ ಪಡಿಸುವಂತೆ ಅಜ್ಜೇನಹಳ್ಳಿ ಗ್ರಾಮಸ್ಥರ ಬಹುಕಾಲದ ಬೇಡಿಕೆಯೂ ಆಗಿತ್ತು. ಈ ನಿಟ್ಟಿನಲ್ಲಿ ಅಜ್ಜೇನಹಳ್ಳಿ ಗ್ರಾಮದ ಜನರಿಗೆ ಸುಗಮ ಸಂಚಾರ ಕಲ್ಪಿಸುವ ಉದ್ದೇಶದಿಂದ ಈ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಇಬ್ಬೀಡು ಗ್ರಾಪಂ ವ್ಯಾಪ್ತಿಯ ಇತರೆ ಗ್ರಾಮಗಳಲ್ಲಿಯೂ ರಸ್ತೆ, ಕುಡಿಯುವ ನೀರು, ಚರಂಡಿ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದರು.
ಗ್ರಾಮದ ಕಿರಣ್ ಸೋಮಶೇಖರ್ ಮಾತನಾಡಿ, ಮಳೆಗಾಲದಲ್ಲಿ ರಸ್ತೆಯ ಅವ್ಯವಸ್ಥೆಯಿಂದ ಬಹಳ ತೊಂದರೆ ಅನುಭವಿಸುತ್ತಿದ್ದೆವು. ಆದರೆ ಈಗ ಕಾಂಕ್ರೀಟ್ ರಸ್ತೆ ನಿರ್ಮಾಣವಾಗುತ್ತಿರುವುದರಿಂದ ಸಂತೋಷವಾಗಿದೆ ಎಂದರು.
ಗ್ರಾಪಂ ಅಧ್ಯಕ್ಷೆ ನವಿನಾ ಅಣ್ಣಪ್ಪ, ಗ್ರಾಮಸ್ಥರಾದ ನಾಗರಾಜ್ ಪರಮೇಶ್, ದೇವರಾಜ್, ಜಯಪ್ಪ, ಮಂಜುನಾಥ್, ನಾಗಮ್ಮ ಸೇರಿದಂತೆ ಇತರರಿದ್ದರು.