ಅರಕಲಗೂಡು ತಾಲೂಕಿನ ಕೊರಟಿಕೆರೆ ಗ್ರಾಮದಲ್ಲಿ ಶಾಸಕ ಎ. ಮಂಜು ನೂತನ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟಿಸಿದರು. ಲತಾ, ದಿನೇಶ್ ಇತರರಿದ್ದರು.
- ಶಾಸಕ ಎ.ಮಂಜು
- ಕೊರಟಿಕೆರೆ ಗ್ರಾಮ
- 65 ಲಕ್ಷ ರೂ.ವೆಚ್ಚದಲ್ಲಿ ಆರೋಗ್ಯ ಉಪಕೇಂದ್ರ
ಅರಕಲಗೂಡು: ತಾಲೂಕಿನ ಕೊರಟಿಕೆರೆ ಗ್ರಾಮದಲ್ಲಿ 65 ಲಕ್ಷ ರೂ.ವೆಚ್ಚದಲ್ಲಿ ಆರೋಗ್ಯ ಉಪಕೇಂದ್ರ ನಿರ್ಮಿಸಲಾಗುವುದು ಎಂದು ಶಾಸಕ ಎ.ಮಂಜು ಹೇಳಿದರು.
ಕೊರಟಿಕೆರೆ ಗ್ರಾಮದಲ್ಲಿ ಭಾನುವಾರ ನೂತನ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಜನರಿಗೆ ತುರ್ತಾಗಿ ಮೂಲ ಸೌಕರ್ಯಗಳ ಸೇವೆ ಕಲ್ಪಿಸುವ ಉದ್ದೇಶದಿಂದ ಈ ಹಿಂದೆ ನಾನು ಸಚಿವರಾಗಿದ್ದಾಗ ಹೊಸ ಗ್ರಾಮ ಪಂಚಾಯಿತಿಯನ್ನು ರಚಿಸಲಾಗಿತ್ತು. ಇದೀಗ ನೂತನ ಕಟ್ಟಡ ನಿರ್ಮಿಸಲಾಗಿದೆ. ಜನತೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಗ್ರಾಮದಲ್ಲಿ ಮುಂದಿನ ವಾರದಿಂದ ಆರೋಗ್ಯ ಉಪ ಕೇಂದ್ರ ಕಟ್ಟಡದ ಕಾಮಗಾರಿಯನ್ನು ಮುಂದಿನ ವಾರ ಪ್ರಾರಂಭಿಸಲಾ ಗುವುದು. ಆರು ತಿಂಗಳೊಳಗಾಗಿ ಆಸ್ಪತ್ರೆ ಕಟ್ಟಡ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಗ್ರಾಪಂ ಅಧ್ಯಕ್ಷೆ ಲತಾ ಈರೇಗೌಡ, ಉಪಾಧ್ಯಕ್ಷ ದಿನೇಶ್, ಸದಸ್ಯರು ಇದ್ದರು.