ಅರಕಲಗೂಡು ತಾಲೂಕಿನ ಶಾನಭೋಗನಹಳ್ಳಿ ಗ್ರಾಮದಲ್ಲಿ ಶ್ರೀ ಮೈಲಾರಲಿಂಗೇಶ್ವರ ಮತ್ತು ಶ್ರೀ ರೇಣುಕಾದೇವಿ ದೇವಸ್ಥಾನ ಅಭಿವೃದ್ಧಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ 1.50 ಲಕ್ಷ ರೂ.ಸಹಾಯ ಧನದ ಚೆಕ್ ವಿತರಿಸಲಾಯಿತು. ಬಾಬು, ನಾಗರಾಜು, ಕವಿತಾ ಇತರರಿದ್ದರು.
ಅರಕಲಗೂಡು : ಸಮಾಜಮುಖಿ ಸೇವೆಗಳ ಮೂಲಕ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ದೇವಸ್ಥಾನಗಳ ಅಭಿವೃದ್ಧಿಗೆ ಸಹಕರಿಸುತ್ತಿದೆ ಎಂದು ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಬಾಬು ತಿಳಿಸಿದರು.
ತಾಲೂಕಿನ ಶಾನಭೋಗನಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಶ್ರೀ ಮೈಲಾರಲಿಂಗೇಶ್ವರ ಮತ್ತು ಶ್ರೀ ರೇಣುಕಾದೇವಿ ದೇವಸ್ಥಾನಕ್ಕೆ 1,50,000 ರೂ.ಪ್ರೋತ್ಸಾಹ ಧನದ ಚೆಕ್ ವಿತರಿಸಿ ಮಾತನಾಡಿದ ಅವರು, ಶ್ರೀ ಕ್ಷೇತ್ರದಿಂದ ದೇವಸ್ಥಾನದ ಅಭಿವೃದ್ಧಿಗೆ ಅನುದಾನ ಒದಗಿಸಲಾಗಿದೆ. ವಿವಿಧ ಯೋಜನೆಗಳ ಮೂಲಕ ಜನಪರವಾಗಿ ಕಾರ್ಯಕ್ರಮಗಳನ್ನು ನಡೆಸಿ ಅನುದಾನ ನೀಡಲಾಗುತ್ತಿದೆ ಎಂದರು.
ದೇವಸ್ಥಾನ ಸಮಿತಿ ಅಧ್ಯಕ ನಾಗರಾಜು ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ದೇವಸ್ಥಾನಗಳ ಜೀರ್ಣೋದ್ಧಾರ ಮಾಡುತ್ತಿರುವುದು ಉತ್ತಮ ಕೆಲಸವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಸ್ಥೆಯ ಸೇವಾ ಪ್ರತಿನಿಧಿ ಕವಿತಾ, ಸ್ವಸಹಾಯ ಸಂಘದ ಸದಸ್ಯರು, ಗ್ರಾಮಸ್ಥರು ಇದ್ದರು.