ಜಿಲ್ಲಾ ಕಾರಾಗೃಹದಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಅಕ್ರಮ ಕಳ್ಳ ಸಾಗಣೆ ವಿರೋಧಿ ದಿನ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ನ್ಯಾ.ಹೇಮಾವತಿ, ಡಾ.ಪಿ.ನಾಗೇಶ್, ಡಾ.ಜೆ ಕಾರ್ತಿಕ್, ಡಾ.ಜೆ ಕಾರ್ತಿಕ್ ಇತರರಿದ್ದರು 
ಹಾಸನ

ತಪ್ಪು ತಿದ್ದುಕೊಂಡು ಉತ್ತಮ ಪ್ರಜೆಗಳಾಗಿರಿ

ಪ್ರಮುಖ ಮುಖ್ಯಾಂಶಗಳು

  • ತಪ್ಪು ತಿದ್ದುಕೊಂಡು ಉತ್ತಮ ಪ್ರಜೆಗಳಾಗಿರಿ
  • ನ್ಯಾ. ಹೇಮಾವತಿ ಕರೆ ಮಾದಕ ವ್ಯಸನ ವಿರೋಧಿ ದಿನ
ಹಾಸನ: ಗೊತ್ತೊ ಗೊತ್ತಿಲ್ಲದೆಯೇ ಕೆಲವೊಂದು ತಪ್ಪುಗಳನ್ನು ಮಾಡಿ ಜೈಲು ಬಂಧಿಯಾಗಿರುತ್ತಿರಿ. ತಪ್ಪನ್ನು ಅರಿತುಕೊಂಡು ನಡತೆಯಲ್ಲಿ ಬದಲಾವಣೆ ಮಾಡಿಕೊಂಡು ಒಳ್ಳೆಯ ಪ್ರಜೆಗಳಾಗಿ ಬಾಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಹೇಮಾವತಿ ಅವರು ತಿಳಿಸಿದ್ದಾರೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ಹಾಸನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಜಿಲ್ಲಾ ಕಾರಾಗೃಹ ಇಲಾಖೆ ಹಾಗೂ ಜಿಲ್ಲಾ ಪೋಲೀಸ್ ಇಲಾಖೆ ಸಹಯೋಗದಲ್ಲಿ ಗುರುವಾರ ಜಿಲ್ಲಾ ಕಾರಾಗೃಹದಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಅಕ್ರಮ ಕಳ್ಳ ಸಾಗಣೆ ವಿರೋಧಿ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ.ಕೆ.ದಾಕ್ಷಾಯಿಣಿ ಅವರು ಫೋಕ್ಸೋ ಕಾಯ್ದೆಗಳ ಕುರಿತು ಅರಿವು ಮೂಡಿಸಿದರು ಹಾಗೂ ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಗೆ ಆಗುವ ದೈಹಿಕ ಸಾಮಾಜಿಕ ಮತ್ತು ಭಾವನಾತ್ಮಕ ಸಮಸ್ಯೆಗಳ ಬಗ್ಗೆ ತಿಳಿಸಿದರು. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ಪಿ.ನಾಗೇಶ್ ಅವರು ಮಾದಕ ವಸ್ತು ವ್ಯಸನ ದಿನವನ್ನು ಆಚರಿಸುವುದರ ಹಿಂದಿನ ಉದ್ದೇಶಗಳ ಕುರಿತು ತಿಳಿಸಿದರು.
ಮನೋವೈದ್ಯರಾದ ಡಾ.ಜೆ. ಕಾರ್ತಿಕ್, ಜಿಲ್ಲಾ ಕಾರಾಗೃಹ ಅಧೀಕ್ಷಕ ಪ್ರಸನ್ನ ಮಾತನಾಡಿದರು. ಕಾರ್ಯಕ್ರಮದಲ್ಲಿ ಅಪರ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿಧಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಗೂ ಜಿಲ್ಲಾ ಕಾರಾಗೃಹದ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.