ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ವಿವಿಧ ವಿಷಯಗಳ ಕುರಿತು ಸಭೆ ನಡೆಸಿ ಡಿಸಿ ಲತಾ ಕುಮಾರಿ ಮಾತನಾಡಿದರು. ಜಿ.ಪಂ.ಉಪಕಾರ್ಯದರ್ಶಿ ಕೃಷ್ಣ ಮೂರ್ತಿ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಬಲರಾಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಿಲ್ ಇತರರಿದ್ದರು.
- ಹಸಿ, ಒಣ ಕಸ ಬೇರ್ಪಡಿಸಲು ಅರಿವು ಮೂಡಿಸಿ
- ಅಧಿಕಾರಿಗಳಿಗೆ ಡಿಸಿ ಸೂಚನೆ
ಹಾಸನ: ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಸಿ ಕಸ ಮತ್ತು ಒಣ ಕಸವನ್ನು ಕಡ್ಡಾಯವಾಗಿ ಬೇರ್ಪಡಿಸಿ ವಾಹನಗಳಿಗೆ ನೀಡುವ ಕುರಿತು ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಬೇಕೆಂದು ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ವಿವಿಧ ವಿಷಯಗಳ ಕುರಿತು ಸಭೆ ನಡೆಸಿ ಮಾತನಾಡಿದ ಅವರು ತ್ಯಾಜ್ಯವನ್ನು ರಸ್ತೆಬದಿಯಲ್ಲಿ ಮತ್ತಿತರ ಸ್ಥಳಗಳಲ್ಲಿ ವಿಲೇವಾರಿ ಮಾಡುವವರನ್ನು ಗುರುತಿಸಿ ಶಿಸ್ತು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.
ತ್ಯಾಜ್ಯ ವಿಲೇವಾರಿ ವ್ಯವಸ್ಥಿತವಾಗಿ ಆಗಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕರು ಎಲ್ಲೆಂದರೆ ಅಲ್ಲಿ ಎಸೆಯದಂತೆ ಅರಿವು ಮೂಡಿಸಲು ಹೆಚ್ಚಿನ ಐಇಸಿ ಚಟುವಟಿಕೆ ಏರ್ಪಡಿಸುವಂತೆ ತಿಳಿಸಿದರು.
ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು ಮುಂಜಾಗ್ರತೆ ವಹಿಸಿ ಸಿದ್ಧತೆ ಕೈಗೊಳ್ಳಬೇಕು. ನಗರಗಲ್ಲಿ ಫುಟ್‌ಪಾತ್ ತೆರವುಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಮೊದಲ ಆದ್ಯತೆ ನೀಡಬೇಕು. ಉದ್ಯಾವನಗಳಲ್ಲಿ ಹೆಚ್ಚಿನ ಗಿಡಮರಗಳನ್ನು ಬೆಳೆಸಲು ಕ್ರಮಹಿಸಬೇಕು, ನಗರಗಳಲ್ಲಿ ಪಾಕಿರ್ಂಗ್ ಸ್ಥಳ ನಿಗದಿ ಪಡಿಸಿ ಪಾಕಿರ್ಂಗ್‌ಗೆ ಅವಕಾಶ ಕಲ್ಪಿಸುವಂತೆ ಡಿಸಿ ಸೂಚಿಸಿದರು.
ಜಿಲ್ಲೆಯಲ್ಲಿನ ಪ್ರವಾಸಿ ಸ್ಥಳಗಳಲ್ಲಿ ಹಿರಿಯ ನಾಗರಿಕರಿಗೆ, ಮಹಿಳೆಯರಿಗೆ, ಅಂಗವಿಕಲರಿಗೆ ಶೌಚಗೃಹ ನಿರ್ಮಿಸಬೇಕು. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಶಾಲೆಗಳು ಇ-ಖಾತಾ ಮಾಡಿಸಬೇಕು. ಶಿಕ್ಷಣ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸುವ ಮೂಲಕ ಖಾತೆಗೆ ಬಾಕಿಯಿರುವುದನ್ನು ಪೂರ್ಣಗೊಳಿಸಬೇಕು ಎಂದರು.
ಹಸಿರು ಹಾಸನ ಯೋಜನೆಯಡಿ ಸ್ವಯಂ ಸೇವಾ ಸಂಸ್ಥೆಗಳಿಗೂ ಅವಕಾಶ ಕಲ್ಪಿಸಿ ಶಾಲೆಗಳ ಆವರಣಗಳಲ್ಲಿ ಗಿಡಗಳ ನೆಟ್ಟು ಬೆಳೆಸಬೇಕು ಹಾಗೂ ಶಾಲೆಯ ಪ್ರತಿಯೊಂದು ಮಕ್ಕಳ ಹೆಸರನ್ನು ಒಂದೊಂದು ಗಿಡಕ್ಕಿಟ್ಟು ಪೋಷಣೆಗೆ ಅವಕಾಶ ಕಲ್ಪಿಸಬೇಕು ಎಂದು ತಿಳಿಸಿದರು.
ಹಸಿರು ಹಾಸನದಡಿಯಲ್ಲಿ ಗಿಡ ನೆಟ್ಟು ಬೆಳೆಸಲು ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಾಂಕೇತಿಕವಾಗಿ ಚಾಲನೆ ನೀಡಲು ಕ್ರಮವಹಿಸಬೇಕು. ಒಂದೊಂದು ಗಿಡಗಳಿಗೆ ಪೌರ ಕಾರ್ಮಿಕರ ಹೆಸರನ್ನಿಟ್ಟು ಪೋಷಣೆ ಮಾಡಲು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣ ಮೂರ್ತಿ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಬಲರಾಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಿಲ್ ಇತರರಿದ್ದರು.