ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿ ವಿಕಲಚೇತನ ಎ.ಆರ್. ಕೃಪಾಲ್ ಅವರನ್ನು ಅಭಿನಂದಿಸಲಾಯಿತು. ಪ್ರಾಂಶುಪಾಲ ಎಚ್.ಬಿ.ಲಕ್ಷ್ಮಣಗೌಡ, ಪಾಲಕರಾದ ರಘು, ಗೀತಾ, ಉಪನ್ಯಾಸಕರಾದ ಮಂಜುನಾಥ್, ಕುಮಾರ್, ಹರೀಶ್ ಇತರರು ಇದ್ದರು. 
ಹಾಸನ

ಕ್ರೀಡೆಯಲ್ಲಿ ಪಾಲ್ಗೊಳ್ಳುವ ಮನೋಭಾವ ಬೆಳೆಸಿಕೊಳ್ಳಿ

ಪ್ರಮುಖ ಮುಖ್ಯಾಂಶಗಳು

  • ವಿದ್ಯಾರ್ಥಿಗಳಿಗೆ ಪ್ರಾಂಶುಪಾಲ ಎಚ್.ಬಿ.ಲಕ್ಷ್ಮಣಗೌಡ ಸಲಹೆ
ಹಿರೀಸಾವೆ: ಕ್ರೀಡೆಯಲ್ಲಿ ಸೋಲು ಹಾಗೂ ಗೆಲುವು ಸಾಮಾನ್ಯ. ಆದರೆ ಪಾಲ್ಗೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಎಚ್.ಬಿ.ಲಕ್ಷ್ಮಣಗೌಡ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಇಲ್ಲಿನ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿ, ಸೋಲು ಹಾಗೂ ಗೆಲುವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಸ್ವರ್ಧೆ ಯಾವುದೇ ಇರಲಿ ಭಾಗವಹಿಸಿದಲ್ಲಿ ಮಾತ್ರ ನಮ್ಮ ಸಾಮರ್ಥ್ಯ ತಿಳಿಯಲು ಸಾಧ್ಯ ಎಂದರು.
ವಿದ್ಯಾರ್ಥಿಗಳಲ್ಲಿ ಇದು ನನ್ನಿಂದ ಆಗುತ್ತದೆಯೋ ಅಥವಾ ಇಲ್ಲವೋ ಎಂಬ ಗೊಂದಲ ಇರಬಾರದು. ಗೆದ್ದರೆ ಬಹುಮಾನ ಸಿಗಲಿದ್ದು, ಸೋತರೆ ಹೆಚ್ಚಿನ ಅನುಭವವಾಗುತ್ತದೆ ಎಂದರು.
ನಮ್ಮ ಕಾಲೇಜಿನ ಪ್ರಥಮ ಬಿ.ಕಾಂ ವಿದ್ಯಾರ್ಥಿ ಎಚ್.ಆರ್.ಕೃಪಾಲ್ ವಿಕಲಚೇತನರಾಗಿದ್ದರೂ ಸಹ ಧೃತಿಗೆಡದೆ ಆತ್ಮವಿಶ್ವಾಸದೊಂದಿಗೆ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ ತೃತೀಯ ಸ್ಥಾನಕ್ಕೆ ಭಾಜನರಾಗಿರುವುದು ನಮ್ಮ ಕಾಲೇಜಿಗೆ ಕೀರ್ತಿ ತಂದಿದ್ದು, ಗೌರವ ಹೆಚ್ಚಿದೆ ಎಂದು ಶ್ಲಾಘಿಸಿದರು.
ಕಳೆದ ವಾರ ಮೈಸೂರಿನಲ್ಲಿ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ, ಮುಕ್ತ ಗಂಗೋತ್ರಿ ಮೈಸೂರು ವತಿಯಿಂದ ಸಂವಿಧಾನ ದಿನಾಚರಣೆ ಪ್ರಯುಕ್ತ ಸ್ನಾತಕ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ‘ಭಾರತದ ಪ್ರಗತಿಯಲ್ಲಿ ಸಂವಿಧಾನದ ಆದರ್ಶಗಳ ಪ್ರಾಮುಖ್ಯತೆ’ ಎಂಬ ವಿಷಯ ಕುರಿತ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ತೃತೀಯ ಸ್ಥಾನ ಪಡೆದ ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿ ಎಚ್.ಆರ್.ಕೃಪಾಲ್ ಅವರನ್ನು ಅಭಿನಂದಿಸಲಾಯಿತು.
ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಯ ಪಾಲಕರಾದ ಎಚ್.ಕೆ.ರಘು, ಸಿ.ಕೆ.ಗೀತಾ ಹಾಗೂ ಇತರರು ಪಾಲ್ಗೊಂಡಿದ್ದರು.