ಆಲೂರು ಪಟ್ಟಣದ ದೊಡ್ಡಿ ಬೀದಿಯಲ್ಲಿ ಶಾಸಕಾ ಸಿಮೆಂಟ್ ಮಂಜು ಅವರು ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ಮಂಜುನಾಥ್, ತೌಫಿಕ್ ಅಹಮದ್, ಅಬ್ದುಲ್ ಖುದ್ದೂಸ್, ಉಮಾ ರವಿ ಪ್ರಕಾಶ್, ಅಬ್ಬನ ಕೃಷ್ಣಮೂರ್ತಿ, ಹೇಮಂತ್, ಪೂವಯ್ಯ ಇತರರಿದ್ದರು.
ಆಲೂರು : ಜನತೆಯ ನಿರೀಕ್ಷೆಗೆ ತಕ್ಕಂತೆ ವಾರ್ಡ್ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯ ಕೈಗೊಂಡು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು.
ಸಕಲೇಶಪುರ ಕ್ಷೇತ್ರ ವ್ಯಾಪ್ತಿಯ ಆಲೂರು ಪಟ್ಟಣದಲ್ಲಿ ಸುಮಾರು 70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಚರಂಡಿ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಆಲೂರು ಪಟ್ಟಣದ ಸೌಂದರ್ಯ ಹೆಚ್ಚಿಸುವ ದೂರದಷ್ಟಿಯನ್ನು ಇಟ್ಟುಕೊಂಡು ರಸ್ತೆ ವಿಸ್ತರಣೆ, ಒಳಚರಂಡಿ, ಸಿಸಿ ರಸ್ತೆ, ಫುಡ್ ಕೋರ್ಟ್ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಹಂತ ಹಂತವಾಗಿ ಆಲೂರು ಪಟ್ಟಣವನ್ನು ಅಭಿವೃದ್ಧಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಲು ವೈಜ್ಞಾನಿಕ ರೀತಿಯಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ.ಸಾರ್ವಜನಿಕರು ಇದಕ್ಕೆ ಸಹಕರಿಸಬೇಕು ಎಂದು ತಿಳಿಸಿದರು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ್, ಸದಸ್ಯರಾದ ತೌಫಿಕ್ ಅಹಮದ್, ಅಬ್ದುಲ್ ಖುದ್ದೂಸ್, ಬಿಜೆಪಿ ಅಧ್ಯಕ್ಷ ಉಮಾ ರವಿ ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಅಬ್ಬನ ಕೃಷ್ಣಮೂರ್ತಿ, ಖಜಾಂಚಿ ಹೇಮಂತ್, ಜಿಲ್ಲಾ ಉಪಾಧ್ಯಕ್ಷ ಪೂವಯ್ಯ, ತಾಲೂಕು ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷ ಬಾಬು, ಗ್ರಾಮ ಪಂಚಾಯಿತಿ ಸದಸ್ಯ ಮಾವನೂರು ಮೋಹನ್, ಬಿಜೆಪಿ ಮುಖಂಡರಾದ ಜೆಸಿಬಿ ಲೋಕೇಶ್, ಲಯನ್ ಸೇವಾ ಸಂಸ್ಥೆ ಮಾಜಿ ಅಧ್ಯಕ್ಷ ನವೀನ್ ದಡದಳ್ಳಿ ಸೇರಿದಂತೆ ಮುಂತಾದವರು ಹಾಜರಿದ್ದರು.