ಹಾಸನದ ಹಾಸನಾಂಬ ಕಲಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಿಸಿ ಲತಾ ಕುಮಾರಿ ಮಾತನಾಡಿದರು. ಮಹೇಶ್, ಡಾ.ಎನ್.ಆರ್.ಪುರುಷೋತ್ತಮ, ಜಗದೀಶ್ ಗಂಗಣ್ಣವರ್ ದೂದ್ ಪೀರ್ ಇತರರಿದ್ದರು. 
ಹಾಸನ

ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಶ್ರದ್ಧೆ, ಏಕಾಗ್ರತೆ ಮುಖ್ಯ

ಪ್ರಮುಖ ಮುಖ್ಯಾಂಶಗಳು

  • ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಶ್ರದ್ಧೆ, ಏಕಾಗ್ರತೆ ಮುಖ್ಯ
  • ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಅಭಿಮತ
ಹಾಸನ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವ ವಿದ್ಯಾರ್ಥಿಗಳಿಗೆ ಶ್ರದ್ಧೆ, ಏಕಾಗ್ರತೆ ಮತ್ತು ಆಸಕ್ತಿ ಮುಖ್ಯವಾಗಿದ್ದು, ಶ್ರಮಪಟ್ಟು ಓದಿದರೆ ಮಾತ್ರ ಯಶಸ್ಸು ಕಾಣಬಹುದು ಎಂದು ಜಿಲ್ಲಾಧಿಕಾರಿ ಕೆ.ಎಸ್.ಲತಾ ಕುಮಾರಿ ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ಹಾಗೂ ಇಲಾಖೆಯ ಪರಿಶಿಷ್ಟ ಜಾತಿ/ವರ್ಗದ ನೌಕರರ ಸಂಘದಿಂದ ನಗರದ ಹಾಸನಾಂಬ ಕಲಾ ಕ್ಷೇತ್ರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಕುರಿತ ಒಂದು ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬರ ಜೀವನದಲ್ಲಿಯೂ ಸಾಧನೆ ಎಂಬುದು ಕಷ್ಟದ ದಾರಿ. ಶ್ರಮ ಮತ್ತು ಶ್ರದ್ಧೆ ಸಾಧನೆಯ ಭಾಗವಾಗಿದ್ದು, ಪದವಿ ಪಡೆಯುವ ಮುನ್ನವೇ ನಾವು ಮುಂದೆ ಯಾವ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬುದನ್ನು ಪ್ರತಿಯೊಬ್ಬರೂ ಯೋಚಿಸಿರಬೇಕು ಎಂದರು.
ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವ ವಿದ್ಯಾರ್ಥಿಗಳು ಮಾನಸಿಕವಾಗಿ ಪರೀಕ್ಷೆ ಎದುರಿಸಲು ಸಿದ್ಧವಾಗಿರಬೇಕು. ಶ್ರಮಪಟ್ಟು ಅಧ್ಯಯನ ನಡೆಸಿದಾಗ ಮಾತ್ರ ಉದ್ಯೋಗವನ್ನು ಪಡೆಯಬಹುದು ಎಂದು ಹೇಳಿದರು.
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವ ವಿದ್ಯಾರ್ಥಿಗಳಿಗೆ ಹಂತಗಳ ಕುರಿತು ಸಂಪನ್ಮೂಲ ವ್ಯಕ್ತಿ ಪಿ.ವಿ.ಬೈರಪ್ಪ ಸುಧೀರ್ಘವಾದ ವಿವರ ನೀಡಿದರು. ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನಾ ಸಂಸ್ಥೆಯ ಯೋಜನಾಧಿಕಾರಿ ಮಹೇಶ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ.ಎನ್.ಆರ್.ಪುರುಷೋತ್ತಮ, ಪ್ರಭಾರ ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣವರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ದೂದ್ ಪೀರ್ ಮತ್ತಿತರರಿದ್ದರು.