ಅರಕಲಗೂಡು ತಾಲೂಕಿನ ರಾಮನಾಥಪುರ ಹೊಂಗನಸು ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಗೃಹೋಪಯೋಗಿ ಅಡುಗೆ ಅನಿಲದ ಸಿಲಿಂಡಗ್‌ಳನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಶಿರಸ್ತೇದಾರ್ ಮಂಜು, ರೂಪಾ ದಾಳಿ ನಡೆಸಿ ವಶಕ್ಕೆ ಪಡೆದರು.
ಅರಕಲಗೂಡು: ತಾಲೂಕಿನ ರಾಮನಾಥಪುರ ಹೊಂಗನಸು ಫ್ಯಾಮಿಲಿ ರೆಸ್ಟೋರೆಂಟ್‌ನಲ್ಲಿ ಮಂಗಳವಾರ ಗೃಹೋಪಯೋಗಿ ಅಡುಗೆ ಅನಿಲದ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಶಿರಸ್ತೇದಾರ್ ಎಲ್.ಬಿ. ಮಂಜು, ರೂಪಾ ದಾಳಿ ನಡೆಸಿ ಸಿಲಿಂಡರ್‌ಗಳನ್ನು ವಶಕ್ಕೆ ಪಡೆದರು.
ನಂತರ ಮಾತನಾಡಿದ ಶಿರಸ್ತೇದಾರ್ ಎಲ್.ಬಿ.ಮಂಜು, ರಾಮನಾಥಪುರ ಹೊಂಗನಸು ಫ್ಯಾಮಿಲಿ ರೆಸ್ಟೋರೆಂಟ್‌ನಲ್ಲಿ 3 ಗೃಹ ಉಪಯೋಗಿ ಅಡುಗೆ ಅನಿಲದ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಕೊಣನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದರು.
ವಿವಿಧ ಹೋಟೆಲ್‌ಗಳು, ಬೇಕರಿಗಳು ಮತ್ತು ಟೀ ಸ್ಟಾಲ್‌ಗಳಲ್ಲಿ ಪರಿಶೀಲನೆ ಮಾಡಲಾಗಿದೆ. ಯಾವುದೇ ಕಾರಣಕ್ಕೂ ಗೃಹೋಪಯೋಗಿ ಅಡುಗೆ ಅನಿಲದ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕಾಗಿ ಉಪಯೋಗಿಸದೆ, ವಾಣಿಜ್ಯ ಸಿಲಿಂಡರ್‌ಗಳನ್ನು ಉಪಯೋಗಿಸುವಂತೆ ಮಾಲೀಕರಿಗೆ ತಿಳಿಸಲಾಗಿದೆ. ತಪ್ಪಿದ್ದಲ್ಲಿ ಅಂತಹವರ ವಿರುದ್ಧ ದೂರು ದಾಖಲಿಸಲಾಗುವುದು ಎಂದು ಹೇಳಿದರು.