ಸಕಲೇಶಪುರದ ನ್ಯಾಯಾಲಯದ ಅವರಣದಲ್ಲಿ ವನಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜೆಎಂಎ್ಸಿ ಪ್ರಧಾನ ನ್ಯಾಯಾಧೀಶರಾದ ಲಕ್ಷ್ಮಿನರಸಿಂಹ, ನ್ಯಾಯಾಧೀಶರಾದ ಜಯಪ್ರಕಾಶ್, ಶ್ರುತಿ ಇತರರು ಇದ್ದರು. 
ಹಾಸನ

ಸ್ವಚ್ಛತೆ ವಿಷಯದಲ್ಲಿ ಅಸಡ್ಡೆ ಬೇಡ

ಕೆಂಡಗಣ್ಣ ಎನ್

ಪ್ರಮುಖ ಮುಖ್ಯಾಂಶಗಳು

  • cleanliness

ಸಕಲೇಶಪುರ: ಸ್ವಚ್ಛತೆ ಪರಿಕಲ್ಪನೆ ಪ್ರತಿಯೊಬ್ಬರಲ್ಲೂ ಮೂಡಿದಾಗ ಸಾಮಾಜ ಸುಂದರವಾಗಿ ಕಾಣಲಿದೆ ಎಂದು ಜೆಎಂಎಫ್‌ಸಿ ಪ್ರಧಾನ ನ್ಯಾಯಾಧೀಶರಾದ ಲಕ್ಷ್ಮಿನರಸಿಂಹ ತಿಳಿಸಿದರು.

ಅರಣ್ಯ ಇಲಾಖೆ, ನ್ಯಾಯಾಂಗ ಇಲಾಖೆ, ಕಾನೂನು ಸೇವಾ ಸಮಿತಿ ಹಾಗೂ ಲೋಕೋಪಯೋಗಿ ಇಲಾಖೆ ಸಂಯುಕ್ತಾಶ್ರಯದಲ್ಲಿ ನ್ಯಾಯಾಲಯದ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವನಮಹೋತ್ಸವ ಹಾಗೂ ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.
ಮನೆಯಂತೆ, ಪರಿಸರವನ್ನು ಸ್ವಚ್ಛವಾಗಿಡುವುದು ನಮ್ಮೆಲ್ಲರ ಕರ್ತವ್ಯ, ಆದರೆ ಈ ಬಗ್ಗೆ ನಮಗೆ ಅಸಡ್ಡೆ ಇದೆ. ಇದನ್ನು ಹೋಗಲಾಡಿಸುವ ಕೆಲಸವಾಗಬೇಕು. ಇದಲ್ಲದೆ ಪ್ರತಿಯೊಬ್ಬರೂ ಮನೆಯ ಸುತ್ತಲಿನ ಪರಿಸರದಲ್ಲಿ ಗಿಡಗಳನ್ನು ನೆಟ್ಟು ಪೋಷಿಸಬೇಕು. ಇದರಿಂದ ಮಾನವನ ಆರೋಗ್ಯ ಸುಧಾರಿಸಲಿದೆ ಎಂದರು.
ಈ ವೇಳೆ ನ್ಯಾಯಾಲಯದ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶರಾದ ಜಯಪ್ರಕಾಶ್, ಹೆಚ್ಚುವರಿ ನ್ಯಾಯಾಧೀಶೆ ಶ್ರುತಿ, ವಕೀಲರ ಸಂಘದ ಅಧ್ಯಕ್ಷ ಯಶವಂತ್, ವಲಯ ಅರಣ್ಯಾಧಿಕಾರಿ ಹೇಮಂತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.