ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ, ಮಹಾನಗರ ಪಾಲಿಕೆ ಹಾಸನ ಮತ್ತು ಕೈಗಾರಿಕೆಗಳು ಇವರ ಸಹಯೋಗದೊಂದಿಗೆ ಪರಿಸರ ದಿನಾಚರಣೆ-2026 ರ ಅಂಗವಾಗಿ ನಗರದ ರೈಲ್ವೆ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ಕೆ ಸಿಇಒ ಶುಭಂ ಶುಕ್ಲ ಚಾಲನೆ ನೀಡಿದರು. ಪರಿಸರ ಅಧಿಕಾರಿ ಭಾಸ್ಕರ್ ಇತರರು ಇತರರಿದ್ದರು.
- ನೈರ್ಮಲ್ಯ ಪಾಲನೆಗೆ ಒತ್ತು ನೀಡಿ
- ಜಿಪಂ ಸಿಇಒ ಶುಭಂ ಶುಕ್ಲ ಹೇಳಿಕೆ
- ಸ್ವಚ್ಛತಾ ಕಾರ್ಯಕ್ಕೆ ಚಾಲನೆ
ಹಾಸನ: ಸ್ವಚ್ಛತೆ ಕಾರ್ಯ ಜೀವನದ ಅವಿಭಾಜ್ಯ ಅಂಗ ಇದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಂ ಶುಕ್ಲ ಹೇಳಿದರು.
ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ, ಮಹಾನಗರ ಪಾಲಿಕೆ ಹಾಸನ ಮತ್ತು ಕೈಗಾರಿಕೆಗಳು ಇವರ ಸಹಯೋಗದೊಂದಿಗೆ ಪರಿಸರ ದಿನಾಚರಣೆ-2026 ರ ಅಂಗವಾಗಿ ನಗರದ ರೈಲ್ವೆ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ನೈರ್ಮಲ್ಯಕ್ಕೆ ಹೆಚ್ಚು ಆದ್ಯತೆ ನೀಡಬೇಕು ನಾಗರಿಕರು ಕೈಜೋಡಿಸಬೇಕು ಎಂದು ತಿಳಿಸಿದರು.
ಮೊದಲು ಮನೆಯಿಂದಲೇ ಸ್ವಚ್ಛತಾ ಅಭಿಯಾನ ಪ್ರಾರಂಭಿಸಿ. ಸಮಾಜದ ಎಲ್ಲ ಕಡೆ ಸ್ವಚ್ಛತೆ ಕಾಪಾಡಲು ನಿಗಾವಹಿಸಿ. ಇದು ಪ್ರತಿದಿನದ ಕಾಯಕವಾಗಲಿ ಎಂದು ತಿಳಿಸಿದರು. ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಪರಿಸರ ಅಧಿಕಾರಿ ಭಾಸ್ಕರ್ ಇತರರಿದ್ದರು.