ಶಾಲಾ ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾವಿಕಾಸ್ ಶಾಲೆಯಲ್ಲಿ ಆಯೋಜಿಸಿದ್ದ ಕ್ರೀಡಾಕೂಟ ಸಮಾರಂಭದಲ್ಲಿ ಅಂತರಾಷ್ಟ್ರೀಯ ಕ್ರೀಡಾಪಟು ಹಾಗೂ ಶಿಕ್ಷಕ ರಾಮೇಗೌಡ ಅವರನ್ನು ಸನ್ಮಾನಿಸಲಾಯಿತು. ಪದ್ಮಾ ಜಯಕುಮಾರ್, ಶಾಲಿನಿ ಕೇಶವ್, ಆಶಾ ರಂಗನಾಥ್ ಇದ್ದರು. 
ಹಾಸನ

ಮಕ್ಕಳನ್ನು ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸಿ

ಪೊಲೀಸ್ ಇನ್‌ಸ್ಪೆಕ್ಟರ್ ರೇವಣ್ಣ ಕರೆ

ಬೇಲೂರು: ಪಠ್ಯದ ಜತೆಗೆ ಮಕ್ಕಳಲ್ಲಿ ಬೌಧಿಕ ಮಟ್ಟ ಹಾಗೂ ಆರೋಗ್ಯ ರಕ್ಷಣೆಗಾಗಿ ಪಾಲಕರು ಹಾಗೂ ಶಿಕ್ಷಕರು ಮಕ್ಕಳನ್ನು ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಬೇಕು ಎಂದು ಪೊಲೀಸ್ ಇನ್‌ಸ್ಪೆಕ್ಟರ್ ರೇವಣ್ಣ ಹೇಳಿದರು.
ಪಟ್ಟಣದ ವಿದ್ಯಾ ವಿಕಾಸ್ ಶಾಲೆಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಗುರುವಾರ ಆಯೋಜಿಸಿದ್ದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಮಕ್ಕಳು ದೇಸಿ ಆಟೋಟಗಳನ್ನು ಮರೆತಿದ್ದಾರೆ. ಮೊಬೈಲ್‌ಗಳಲ್ಲಿನ ವಿಡಿಯೋ ಗೇಮ್‌ಗಳಿಗೆ ಮಾರು ಹೋಗಿದ್ದಾರೆ. ಈ ಅಭ್ಯಾಸಗಳು ಮಕ್ಕಳ ದೈಹಿಕ, ಬೌದ್ಧಿಕ ಬೆಳವಣಿಗೆಗಳನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ಮಕ್ಕಳನ್ನು ಪಠ್ಯದೊಂದಿಗೆ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸುವಂತೆ ಮಾಡಿದಾಗ ಮಾತ್ರ ಅವರಲ್ಲಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬೆಳೆವಣಿಗೆ ಹೊಂದಲು ಸಾಧ್ಯ. ಆದ್ದರಿಂದ ಪಾಲಕರಾದ ನಾವು ಮಕ್ಕಳಿಗೆ ಮೊಬೈಲ್ ಕೊಟ್ಟರೆ ಅವರಿನ್ನೇನು ಮಾಡುತ್ತಾರೆ? ಮಕ್ಕಳಿಗೆ ಫೋನ್ ಕೊಡದೆ ತಿಳಿ ಹೇಳಿ ಅವರ ಭವಿಷ್ಯ ರೂಪಿಸುವಲ್ಲಿ ಎಲ್ಲರೂ ಮುಂದಾಗಬೇಕು ಎಂದರು.
ಅಂತರಾಷ್ಟ್ರೀಯ ಕ್ರೀಡಾಪಟು ಹಾಗೂ ಶಿಕ್ಷಕ ರಾಮೇಗೌಡ ಮಾತನಾಡಿ, ಹಿಂದೆ ಭಾರತದ ಕ್ರೀಡಾಪಟುಗಳು ಒಲಿಂಪಿಕ್ ಕ್ರೀಡಾಕೂಟದಲ್ಲಿ ಒಂದು ಅಥವಾ ಎರಡು ಪದಕಗಳನ್ನು ಪಡೆದುಕೊಳ್ಳುತಿದ್ದರು. ಆದರೆ ಈಗ ಸರ್ಕಾರ ಕ್ರೀಡೆಗೆ ಹೆಚ್ಚಿನ ಒತ್ತು ನೀಡುತ್ತಿರುವ ಕಾರಣ ಹತ್ತರಿಂದ, ಹನ್ನೇರೆಡು ಪದಕಗಳನ್ನು ಬಾಚುತ್ತಿದ್ದಾರೆ. ಅಲ್ಲದೆ ಪ್ರಾಥಮಿಕ ಹಂತದಿಂದಲೇ ವಿದ್ಯಾರ್ಥಿಗಳಿಗೆ ಕ್ರೀಡಾಸಕ್ತಿ ಬೆಳೆಸಿದರೆ ಭಾರತ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪದಕಗಳನ್ನು ಪಡೆದುಕೊಳ್ಳಲು ಸಹಕಾರಿಯಾಗುತ್ತದೆ ಎಂದರು.
ವಿದ್ಯಾ ವಿಕಾಸ್ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಬಿ.ಎಂ.ರಂಗನಾಥ್ ಮಾತನಾಡಿ, ವಿದ್ಯಾರ್ಥಿಗಳ ಮುಂದಿನ ಜೀವನ ಉಜ್ವಲವಾಗಬೇಕಾದರೆ ಶಿಕ್ಷಣ ಅತ್ಯವಶ್ಯಕ, ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಸಾಧನೆ ಮಾಡಲು ಕ್ರೀಡೆಯೂ ಸಹಕಾರಿಯಾಗುತ್ತದೆ. ಆದ್ದರಿಂದ ನಮ್ಮ ಶಾಲೆಯಲ್ಲಿ ಉತ್ತಮ ಶಿಕ್ಷಣ ನೀಡುವುದರ ಜತೆಗೆ ಕ್ರೀಡೆ, ಕಲೆ, ಸಾಹಿತ್ಯಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದೇವೆ ಎಂದರು.
ಶಾಲೆಯ ಆಡಳಿತಾಧಿಕಾರಿ ಪದ್ಮಾ ಜಯಕುಮಾರ್, ವಿದ್ಯಾ ವಿಕಾಸ್ ಶಾಲೆಯ ಮುಖ್ಯಸ್ಥೆ ಶಾಲಿನಿ ಕೇಶವ್, ಟ್ರಸ್ಟಿ ಆಶಾ ರಂಗನಾಥ್, ಪ್ರಾಂಶುಪಾಲ ಬಾಲಾಜಿ ಸೆಲ್ವರಾಜ್, ಮಾದೇಗೌಡ ಸೇರಿದಂತೆ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿದ್ದರು.