ಚಗಚಗೆರೆಯಲ್ಲಿ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ ಅವರಿಗೆ ಸನ್ಮಾನಿಸಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ಮೋಹನ್ ಕುಮಾರ್, ನಂಜೇಗೌಡ, ಕುಮಾರ್, ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು ಇದ್ದರು. 
ಹಾಸನ

ಗುಣಮಟ್ಟಣ ಶಿಕ್ಷಣಕ್ಕೆ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ

ಪ್ರಮುಖ ಮುಖ್ಯಾಂಶಗಳು

  • ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ ಸಲಹೆ
  • ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಸಮಾರಂಭ
ಗಂಡಸಿ : ವಿದ್ಯಾಭ್ಯಾಸ, ಆರೋಗ್ಯ ಮತ್ತು ಪರಿಸರ ಸಂರಕ್ಷಣೆ ಬಗ್ಗೆ ಪ್ರಾಥಮಿಕ ಹಂತದಲ್ಲೇ ಸಕ್ರಿಯವಾಗಿ ಕಾಳಜಿ ವಹಿಸುವಂತೆ ಸರ್ಕಾರಿ ಶಾಲಾ ಮಕ್ಕಳಿಗೆ ಪಾಲಕರು ಮತ್ತು ಶಿಕ್ಷಕರು ಮನವರಿಕೆ ಮಾಡಿಕೊಡುವುದು ಅಗತ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ ಹೇಳಿದರು.
ಹೋಬಳಿಯ ಚಗಚಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.
ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗದಂತೆ ಸ್ಥಳೀಯ ಸಂಘ ಸಂಸ್ಥೆಗಳು, ಗ್ರಾಮ ಪಂಚಾಯಿತಿಯವರು ಜಾಗೃತಿ ವಹಿಸಬೇಕಾಗಿದೆ. ಕೇರಳ ಸರ್ಕಾರದ ಮಾದರಿಯಲ್ಲಿ ಕರ್ನಾಟಕದಲ್ಲೂ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರಲು ಪಾಲಕರ ಮನವೊಲಿಸುವ ಜವಾಬ್ದಾರಿ ಸ್ಥಳೀಯ ಗ್ರಾಮ ಪಂಚಾಯಿತಿ ವಹಿಸಿಕೊಳ್ಳಬೇಕು. ಆಗ ಮಾತ್ರ ಸ್ಥಳೀಯ ಮಟ್ಟದಲ್ಲೇ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದಂತಾಗುತ್ತದೆ ಎಂದರು.
ಚಗಚಗೆರೆ ಸುತ್ತಮುತ್ತಲ ಕೆಲವು ಗ್ರಾಮಗಳ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಇಲ್ಲದೆ ಮುಚ್ಚುವ ಹಂತ ತಲುಪಿದೆ. ಶಿಕ್ಷಣ ಇಲಾಖೆಯ ಮ್ಯಾಗ್ನೆಟ್ ಯೋಜನೆ ಅಡಿ ಚಗಚಗೆರೆ ಶಾಲೆಯನ್ನು ಗುರುತಿಸಲಾಗಿದೆ. ಲಕ್ಷಾಂತರ ರೂ. ಖರ್ಚು ಮಾಡಿ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುವ ಬದಲು ಉಚಿತವಾಗಿ ಗುಣಾತ್ಮಕ ಶಿಕ್ಷಣ ನೀಡುವ ಸರ್ಕಾರಿ ಶಾಲೆಗೆ ಸೇರಿಸಿ ಎಂದು ಪಾಲಕರಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಮೋಹನ್ ಕುಮಾರ್, ಉಪಾಧ್ಯಕ್ಷೆ ಸೌಮ್ಯಾ, ಆಶಾ ಗ್ರಾ.ಪಂ.ಸದಸ್ಯ ಕುಮಾರ್, ನಂಜೇಗೌಡ, ಪ್ರಮೀಳಾ ಮರಿಯಪ್ಪ, ಶಿವಶಂಕರಚಾರ್, ರಾಮಚಂದ್ರು, ಜಯರಾಮ್, ಗ್ರಾಮದ ಮುಖಂಡರಾದ ದೊಡ್ಡಪಾಪಣ್ಣ, ಶಂಕ್ರಣ್ಣ ಇತರರು ಇದ್ದರು.
ಫೋಟೋ -14-ಸ್ಕೂಲ್ ಪ್ರೊಗ್ರಾಂ