ಅರಕಲಗೂಡು ತಾಲೂಕಿನ ದಾಸನಪುರ ಬೆಟ್ಟದ ಶ್ರೀ ರಂಗನಾಥಸ್ವಾಮಿ ಜಾತ್ರಾ ಮಹೋತ್ಸವ ಪ್ರಯುಕ್ತ ದೇವರ ಮೂರ್ತಿಗೆ ಹೂವಿನಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು.
ಅರಕಲಗೂಡು: ತಾಲೂಕಿನ ದಾಸನಪುರ ಬೆಟ್ಟದ ಶ್ರೀ ರಂಗನಾಥಸ್ವಾಮಿ ಜಾತ್ರಾ ಮಹೋತ್ಸವ ಶನಿವಾರ ಸಡಗರದಿಂದ ಜರುಗಿತು. ಬೆಟ್ಟದಲ್ಲಿ ಜನಜಾತ್ರೆಯೇ ನೆರೆದಿತ್ತು. ಸುತ್ತಮುತ್ತಲಿನ ಹಳ್ಳಿಗಳಿಂದ ಸಹಸ್ರಾರು ಭಕ್ತರು ಆಗಮಿಸಿದ್ದರು. ಬೆಟ್ಟವೇರಿ ಹೇಮಾವತಿ ಹಿನ್ನೀರು ತಟದಲ್ಲಿರುವ ಶ್ರೀ ರಂಗನಾಥಸ್ವಾಮಿ ದೇವಸ್ಥಾನಸಲ್ಲಿ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.