ಅರಕಲಗೂಡು ತಾಲೂಕಿನ ಬೆಟ್ಟಸೋಗೆ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಎ. ಮಂಜು ಕಪ್ ಕ್ರಿಕೆಟ್ ಪಂದ್ಯಾವಳಿಯನ್ನು ಶಾಸಕ ಎ. ಮಂಜು ಉದ್ಘಾಟಿಸಿದರು. ಶಿವಮೂರ್ತಿ, ಯೋಗೇಶ್, ಹೇಮಂತಕುಮಾರ್, ಮಹೇಶ್, ಶಿವು ಇತರರಿದ್ದರು. 
ಹಾಸನ

ಕ್ರೀಡೆಗಳ ಜತೆ ಉನ್ನತ ಶಿಕ್ಷಣದ ಕಡೆ ಗಮನಹರಿಸಿ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎ.ಮಂಜು ಸಲಹೆ
  • ಕಪ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ
ಅರಕಲಗೂಡು: ಗ್ರಾಮೀಣ ಭಾಗದಲ್ಲಿ ಯುವಕರು ಕ್ರೀಡೆಗಳ ಜತೆಗೆ ಉನ್ನತ ವಿದ್ಯಾಭ್ಯಾಸಗಳಿಸಬೇಕು ಎಂದು ಶಾಸಕ ಎ.ಮಂಜು ಹೇಳಿದರು.
ತಾಲೂಕಿನ ಬೆಟ್ಟಸೋಗೆ ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಎ. ಮಂಜು ಕಪ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಯುವಕರು ಇಂದು ಕ್ರೀಡೆಗಳತ್ತ ಹೆಚ್ಚು ಆಸಕ್ತಿ ವಹಿಸುತ್ತಿದ್ದು, ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಶಿಕ್ಷಣ ಕಡೆಗೂ ಗಮನ ಹರಿಸಬೇಕು. ಕ್ರೀಡೆಗಳಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಸಾಮರಸ್ಯ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ನಿವೃತ್ತ ಶಿಕ್ಷಕ ಬಿ.ವಿ.ಶಿವಮೂರ್ತಿ ಮಾತನಾಡಿದರು. ಮುಖಂಡರಾದ ಮಹೇಶ್, ಯೋಗೇಶ್, ಶಿವು, ಹೇಮಂತಕುಮಾರ್, ಗಿರೀಶ್, ಶ್ರೀಕಂಠಪ್ಪ, ಸಿದ್ದಯ್ಯ, ಮಲ್ಲೇಶ್ ಗ್ರಾಮಸ್ಥರು ಇದ್ದರು.