ಅರಕಲಗೂಡಿನಲ್ಲಿ ಹವಾಮಾನ ಬದಲಾವಣೆ ಮತ್ತು ಮಾನವ ಆರೋಗ್ಯ ರಾಷ್ಟ್ರೀಯ ಅರಿವು ಕಾರ್ಯಕ್ರಮದ ಅಂಗವಾಗಿ ಗುರುವಾರ ಆರೋಗ್ಯ ಅರಿವು ಜಾಥಾ ನಡೆಸಲಾಯಿತು. 
ಹಾಸನ

ಆರೋಗ್ಯ ರಕ್ಷಣೆಗೆ ಸರಳ ಜೀವನ ಕ್ರಮ ಅನುಸರಿಸಿ

ಪ್ರಮುಖ ಮುಖ್ಯಾಂಶಗಳು

  • ತಹಸೀಲ್ದಾರ್ ಕೆ.ಸಿ. ಸೌಮ್ಯಾ ಸಲಹೆ
  • ಹವಾಮಾನ ಬದಲಾವಣೆ ಹಿನ್ನೆಲೆಯಲ್ಲಿ ಅರಿವು ಜಾಥಾ
ಅರಕಲಗೂಡು: ಬಿಸಿಲಿನ ತಾಪ ಹೆಚ್ಚುತ್ತಿರುವ ಕಾರಣ ಎಲ್ಲರೂ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸರಳವಾದ ಜೀವನ ಕ್ರಮಗಳನ್ನು ಅನುಸರಿಸಬೇಕು ಎಂದು ತಹಸೀಲ್ದಾರ್ ಕೆ.ಸಿ. ಸೌಮ್ಯಾ ಸಲಹೆ ನೀಡಿದರು.
ಪಟ್ಟಣದ ಅನಕೃ ವೃತ್ತದಲ್ಲಿ ತಾಲೂಕು ಆಡಳಿತ, ಪಟ್ಟಣ ಪಂಚಾಯಿತಿ, ಆರೋಗ್ಯ ಇಲಾಖೆ ಸಹಯೋಗದಲ್ಲಿ ಹವಾಮಾನ ಬದಲಾವಣೆ ಮತ್ತು ಮಾನವ ಆರೋಗ್ಯ ರಾಷ್ಟ್ರೀಯ ಅರಿವು ಕಾರ್ಯಕ್ರಮದ ಅಂಗವಾಗಿ ಗುರುವಾರ ಆಯೋಜಿಸಿದ್ದ ಆರೋಗ್ಯ ಅರಿವು ಜಾಥಾಗೆ ಚಾಲನೆ ನೀಡಿ ಮಾತನಾಡಿ, ಬಿಸಿಲಿನ ಬೇಗೆ ವಿಪರೀತವಾಗುತ್ತಿದ್ದು ಇದಕ್ಕಾಗಿ ಜನರು ಆರೋಗ್ಯಕ್ಕಾಗಿ ಹಲವು ರಕ್ಷಣಾತ್ಮಕ ಕ್ರಮಗಳನ್ನು ಅನುಸರಿಸಬೇಕು. ಮಧ್ಯಾಹ್ನದ ಸಮಯ ತಂಪು ಪಾನೀಯಗಳನ್ನು ಸೇವಿಸಿ ಸಾಧವಾದಷ್ಟು ಮನೆಯಲ್ಲಿ ಉಳಿಯಬೇಕು, ಕಾಟನ್ ಬಟ್ಟೆಗಳನ್ನು ಧರಿಸಬೇಕು ಎಂದರು.
ಪಪಂ ಮುಖ್ಯಾಧಿಕಾರಿ ನಾಗೇಂದ್ರ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ಪುಷ್ಪಲತಾ, ಆರೋಗ್ಯ ಶಿಕ್ಷಣಾಧಿಕಾರಿ ಮಂಜುಳಾ, ಪರಮೇಶ್, ಲೀನಾ ಕುಮಾರಿ, ಕವಿತಾ, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.