ಕಣ್ಣಿನ ತಪಾಸಣಾ 
ಹಾಸನ

ನಾಳೆ ಕಣ್ಣಿನ ತಪಾಸಣಾ ಉಚಿತ ಶಿಬಿರ

ಲಲಾಟಾಕ್ಷ ಎಸ್
ಅರಕಲಗೂಡು: ಸ್ವಸ್ಥ ಸಮಾಜ ನಿರ್ಮಾಣ ಸಮಿತಿಯಿಂದ ತಾಲೂಕಿನ ರಾಮನಾಥಪುರದ ಭಾಗ್ಯಶ್ರೀ ಕಲ್ಯಾಣ ಮಂಟಪದಲ್ಲಿ ಮೇ 15ರಂದು ಕಣ್ಣಿನ ತಪಾಸಣಾ ಉಚಿತ ಶಿಬಿರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ಪ್ರದೀಪ್ ರಾಮಸ್ವಾಮಿ ತಿಳಿಸಿದರು.
ಅಂದು ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆವರೆಗೆ ಕೊಯಮತ್ತೂರಿನ ಅರವಿಂದ ಕಣ್ಣಿನ ಆಸ್ಪತ್ರೆಯ ತಜ್ಞ ವೈದ್ಯರು ಕಣ್ಣಿನ ಸಮಸ್ಯೆಗಳ ಕುರಿತು ತಪಾಸಣೆ ನಡೆಸಿ ಚಿಕಿತ್ಸೆ ಮತ್ತು ಸಲಹೆ ನೀಡುವರು. ಶಸ್ತ್ರಚಿಕಿತ್ಸೆ ಅಗತ್ಯವಿದ್ದವರಿಗೆ ಕೊಯಮತ್ತೂರಿನ ಆಸ್ಪತ್ರೆಗೆ ಕರೆದೊಯ್ದು ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲಾಗುವುದು. ಮಾರ್ಚ್‌ನಲ್ಲಿ ಅರಕಲಗೂಡು ಪಟ್ಟಣದಲ್ಲಿ ಸಮಿತಿಯಿಂದ ಉಚಿತ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಹಲವರು ಚಿಕಿತ್ಸೆ ಪಡೆಯಲು ಸಾಧ್ಯವಾಗದೆ ಮತ್ತೊಮ್ಮೆ ಶಿಬಿರ ಏರ್ಪಡಿಸುವಂತೆ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಶಿಬಿರ ಆಯೋಜಿಸಲಾಗಿದೆ. ಅಗತ್ಯವಿದ್ದವರು ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಯ ಕಲಾ, ವಾಣಿಜ್ಯ, ಹಾಗೂ ವಿಜ್ಞಾನ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದರು. ಮುಖಂಡರಾದ ಬಸವರಾಜ್, ಸಿದ್ದರಾಮು, ಮೋಹನ್, ನಸ್ರುಲ್ಲಾ ಟಿಪ್ಪು, ಸೋಮಣ್ಣ, ಬಾಬು, ಗಂಗಾಧರ್ ಇದ್ದರು.