ಪಟ್ಟಣದ ಶಿಕ್ಷಕರ ಭವನದಲ್ಲಿ ಶೈಕ್ಷಣಿಕ ಕಾರ್ಯಾಗಾರ ಮತ್ತು ಮಹಿಳಾ ದಿನಾಚರಣೆಯನ್ನು ಸಂಸದ ಶ್ರೇಯಸ್ ಎಂ.ಪಟೇಲ್ ಉದ್ಘಾಟಿಸಿ ಮಾತನಾಡಿದರು. ತಹಸೀಲ್ದಾರ್ ವೈ.ಎಂ.ರೇಣುಕುಮಾರ್, ಗೀತಾ, ಉಷಾ ನರಸಿಂಹನ್ ಇತರರು ಇದ್ದರು.
ಹೊಳೆನರಸೀಪುರ: ಪ್ರಾಥಮಿಕ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆತಾಗ ಪ್ರೌಢಶಾಲಾ ಹಂತದ ಶಿಕ್ಷಣ ಪ್ರಗತಿಯಲ್ಲಿರುತ್ತದೆ ಎಂದು ಸಂಸದ ಶ್ರೇಯಸ್ ಎಂ.ಪಟೇಲ್ ಪ್ರಶಂಸಿದರು.
ಪಟ್ಟಣದಲ್ಲಿ ಶುಕ್ರವಾರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಶಿಕ್ಷಣ ಇಲಾಖೆಯೊಂದಿಗೆ ಶೈಕ್ಷಣಿಕ ಕಾರ್ಯಾಗಾರ ಮತ್ತು ವಿಶ್ವ ಮಹಿಳಾ ದಿನಾಚರಣೆ ಉದ್ಘಾಟಿಸಿ ಮತನಾಡಿದರು. ಸರ್ಕಾರಿ ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಗೆ ಬರುವ ಕೆಲವು ವಿದ್ಯಾರ್ಥಿಗಳ ಶಿಕ್ಷಣ ಗುಣಮಟ್ಟ ಕುಂಠಿತವಾಗಿರುತ್ತದೆ ಎಂಬ ದೂರುಗಳಿವೆ. ಈ ವಿಷಯದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ತಿಳಿಸಿದರು.
ಬಿಇಒ ಸೋಮಲಿಂಗೇಗೌಡ ಮಾತನಾಡಿ, ಎಲ್ಲರಲ್ಲೂ ದೇವರನ್ನು ಕಾಣುವ ಮನೋಭಾವ ಶಿಕ್ಷಕರದ್ದಾಗಬೇಕು. ನಮ್ಮ ವೃತ್ತಿಯಲ್ಲಿ ತಾರತಮ್ಯ ಇರಬಾರದು. ಈ ನಿಟ್ಟಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ತಯಾರಿಗೆ ಶೈಕ್ಷಣಿಕ ಕಾರ್ಯಾಗಾರ ನಡೆಸಲಾಗುತ್ತಿದೆ. ಲೋಪ ಇಲ್ಲದಂತೆ ಅಚ್ಚುಕಟ್ಟಾಗಿ ನಿಯಮ ಅನುಸರಿಸಿ ಪರೀಕ್ಷೆ ನಡೆಸಬೇಕಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಟ್ಟಡ ಶಿಥಿಲವಾಗಿದೆ. ಹೊಸ ಕಟ್ಟಡ ನಿರ್ಮಿಸಲು ಕೋರಿ ಶಿಕ್ಷಕರ ಸಂಘದ ಸದಸ್ಯರು ಸಂಸದರಿಗೆ ಅಹವಾಲು ನೀಡಿದರು.
ತಹಸೀಲ್ದಾರ್ ವೈ.ಎಂ.ರೇಣುಕುಮಾರ್ ಮಾತನಾಡಿದರು. ಡಯಟ್‌ನ ಉಪನ್ಯಾಸಕಿ ಗೀತಾ, ಉಪನ್ಯಾಸಕಿ ಉಷಾ ನರಸಿಂಹನ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹಲಿಂಗ, ಸಾವಿತ್ರಿಬಾಯಿ ಫುಲೆ ಸಂಘದ ಅಧ್ಯಕ್ಷೆ ಶಿಕ್ಷಕಿ ಮಮತಾ, ಕಾರ್ಯದರ್ಶಿ ಭ್ರಮರಾಂಬ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಸುಜಾತ್‌ಅಲಿ ಮತ್ತು ಶಿಕ್ಷಕ ಯತೀಶ್ ಉಪಸ್ಥಿತರಿದ್ದರು.