ಕಾಮರ್ಸ್ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದ ರಾಕೇಶ್‌ಗೆ ಜ್ಞಾನಜ್ಯೋತಿ ಪುರಸ್ಕಾರ ನೀಡಲಾಯಿತು. ಪ್ರಸನ್ನ ಕುಮಾರ, ಕಿರಣ್, ಸುಧಾ ಪ್ರವೀಣ್, ಅಜಯ್, ಹರೀಶ್ ಇತರರು ಇದ್ದರು.
- Goal, determination, and dedication
ಅರಸೀಕೆರೆ ಗ್ರಾಮಾಂತರ: ವಿದ್ಯಾರ್ಥಿಗಳು ದೊಡ್ಡ ಗುರಿಯೊಂದಿಗೆ ಭವಿಷ್ಯವನ್ನು ಕಟ್ಟಿಕೊಳ್ಳುವ ಪ್ರಯತ್ನ ಮಾಡಬೇಕು. ಗುರಿ, ಛಲ ಮತ್ತು ಶ್ರದ್ಧೆ ಪ್ರತಿಯೊಬ್ಬ ವಿದ್ಯಾರ್ಥಿಯ ಸಾಧನೆಗೆ ಮುನ್ನುಡಿ ಬರೆಯುತ್ತವೆ ಎಂದು ಶ್ರೀ ಸಿದ್ದರಾಮೇಶ್ವರ ಶಿಕ್ಷಣ ಸಂಸ್ಥೆಯ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಕಿರಣ್ ತಿಳಿಸಿದರು.
ತಾಲೂಕಿನ ಬಾಣವರದ ಶ್ರೀ ಸಿದ್ದರಾಮೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿದ್ದ ಜ್ಞಾನಜ್ಯೋತಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.
ಸಾಧನೆ ಹಾದಿ ಎಂದಿಗೂ ಸುಲಭವಾಗಿರುವುದಿಲ್ಲ. ನಿರಂತರ ಪ್ರಯತ್ನ ವಿದ್ಯಾರ್ಥಿಗಳನ್ನು ಸಾಧಕರನ್ನಾಗಿ ರೂಪಿಸುತ್ತದೆ. ವಿದ್ಯಾರ್ಥಿಗಳು ತಾವು ಮಾಡುವ ಕೆಲಸದಲ್ಲಿ ನಿಷ್ಠೆ ಹಾಗೂ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಉನ್ನತ ಶಿಕ್ಷಣ ಗ್ರಾಮೀಣ ಭಾಗದ ಮಕ್ಕಳಿಗೆ ಹೆಚ್ಚು ಹೆಚ್ಚು ದೊರೆಯಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು, ಪಾಲಕರು ಕಾಳಜಿ ವಹಿಸಬೇಕು ಎಂದರು.
ಸಂಸ್ಥೆಯ ಮುಖ್ಯಸ್ಥರಾದ ಪ್ರಶಾಂತ್ ಮಾತನಾಡಿ, ಗ್ರಾಮೀಣ ಭಾಗದ ಮಕ್ಕಳ ಕನಸಿಗೆ ಕೈಜೋಡಿಸುವುದು ನಮ್ಮ ಸಂಸ್ಥೆಯ ಮುಖ್ಯ ಧ್ಯೇಯವಾಗಿದೆ. ಈ ನಿಟ್ಟಿನಲ್ಲಿ ಉತ್ತಮ ಅಂಕ ಗಳಿಸಿದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಮಕ್ಕಳನ್ನು ಸತ್ಕರಿಸಲಾಗುತ್ತಿದೆ ಎಂದು ತಿಳಿಸಿದರು.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಾಮರ್ಸ್ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯಕ್ಕೆ ಮೂರನೇ ಸ್ಥಾನ ಪಡೆದ ರಾಕೇಶ್ ಹಾಗೂ ಗ್ರಾಮೀಣ ಭಾಗದಿಂದ ಮೆಡಿಕಲ್ ಕಾಲೇಜಿನಲ್ಲಿ ಪ್ರವೇಶ ಪಡೆದ ಎಚ್.ಪಿ. ಹಿತೈಷ್ ರವರಿಗೆ ಜ್ಞಾನಜೋತಿ ಪುರಸ್ಕಾರ ನೀಡಲಾಯಿತು. ಶಿಕ್ಷಕಿ ಸುಧಾ ಪ್ರವೀಣ್, ಅಜಯ್, ಹರೀಶ್, ಶೋಭಿತಾ ಇತರರು ಇದ್ದರು