ಅರಕಲಗೂಡು ತಾಲೂಕಿನ ರಾಮನಾಥಪುರದಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ಶ್ರೀ ರಾಮೇಶ್ವರ, ಶ್ರೀ ಅಗಸ್ತ್ಯೇಶ್ವರ, ಶ್ರೀ ಪ್ರಸನ್ನ ಸುಬ್ರಹ್ಮಣ್ಯಸ್ವಾಮಿ ದೇವರ ಉತ್ಸವ ನಡೆಸಲಾಯಿತು.
ಅರಕಲಗೂಡು: ತಾಲೂಕಿನ ರಾಮನಾಥಪುರದಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ವಿವಿಧ ದೇವರ ಉತ್ಸವ ಗುರುವಾರ ಭಕ್ತಿ ಭಾವದಿಂದ ಜರುಗಿತು.
ಚತುರ್ಯುಗಮೂರ್ತಿ ಶ್ರೀ ರಾಮೇಶ್ವರ, ಶ್ರೀ ಅಗಸ್ತ್ಯೇಶ್ವರ, ಶ್ರೀ ಪ್ರಸನ್ನ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ಪೂರೈಸಿದ ಬಳಿಕ ದೇವರ ಉತ್ಸವ ಮೂರ್ತಿಯನ್ನು ಹೊರತಂದು ಅಲಂಕೃತ ಅಡ್ಡಮೇಲೆ ಉತ್ಸವ ನಡೆಸಿ ಸಂಕ್ರಾಂತಿ ಮಂಟಪದಲ್ಲಿ ಪೂಜಾ ಪುನಸ್ಕಾರಗಳನ್ನು ಸಲ್ಲಿಸಲಾಯಿತು. ಭಕ್ತರಿಗೆ ಪ್ರಸಾದ ವಿತರಿಸಲಾಯಿತು.